ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ಇವತ್ತು ವಿಶ್ವವೇ ತಲ್ಲಣಿಸಿದೆ. ಅನೇಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಈ ರೀತಿ ತೊಂದರೆಗೊಳಗಾದವರಿಗೆ ಸಹಾಯ ಮಾಡುವ ಅನೇಕ ಸಮಾಜ ಸೇವೆಯ ಕೆಲಸಗಳೂ ಸಹ ನಡೆಯುತ್ತಿವೆ. ಈ ನಿಟ್ಟಿನಲ್ಲಿ ನಮ್ಮ ಸ್ಯಾಂಡಲ್ ವುಡ್ ತಾರೆಯರೂ ಸಹ ತೊಂದರೆಗೊಳಗಾದವರಿಗೆ ಸಹಾಯ ಮಾಡುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಲ್ಲಿ ನಟಿ ಸುಮನ್ ನಗರ್ ಕರ್ ಸಹ ಒಬ್ಬರು.
ಬೆಂಗಳೂರು ರನ್ನರ್ಸ್ ಆಯೋಜಿಸಿರುವ #Run2020-Move2feed fund raise ಅಭಿಯಾನದಲ್ಲಿ ಸುಮನ್ ನಗರ್ ಕರ್ ಕೂಡ ತಮ್ಮ ಪತಿ ಗುರು ಜೊತೆಯಲ್ಲಿ ಭಾಗಿಯಾಗಿದ್ದಾರೆ. ಜುಲೈ ಒಂದರಿಂದ ಇಪ್ಪತ್ತರವರೆಗೆ, ಇಪ್ಪತ್ತು ದಿನಗಳ ಕಾಲ ಇಪ್ಪತ್ತು ರನ್ನರ್ಸ್ ಪ್ರತಿದಿನ ಇಪ್ಪತ್ತು ಕಿಲೋಮೀಟರ್ ಓಡಿ ಈ ಮೂಲಕ fund raise(ಹಣ ಸಂಗ್ರಹಣೆ) ಮಾಡಿ, ಹಾಗೆ ಸಂಗ್ರಹಣೆಯಾದ ಹಣವನ್ನು ಬಡವರಿಗೆ, ದಿನಗೂಲಿಯವರಿಗೆ, ಕಷ್ಟದಲ್ಲಿರುವವರಿಗೆ ಸಾಯಿ ವಿಶ್ವನಾಥ್ ಮೆಮೋರಿಯಲ್ ಟ್ರಸ್ಟಿನ ಮೂಲಕ ದಿನಸಿಗಳನ್ನು ಸರಬರಾಜು ಮಾಡಲಿದ್ದಾರೆ. ಈ ಒಂದು ಒಳ್ಳೆಯ ಕಾರ್ಯಕ್ಕೆ ಸಹಾಯ ಮಾಡಲಿಚ್ಚಿಸುವವರು Facebook Move2feed ಅಥವಾ ಸುಮನ್ ನಗರ್ ಕರ್ ಅವರ Facebook ಪೇಜ್ ಅಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.

Get In Touch With Us info@kalpa.news Whatsapp: 9481252093







Discussion about this post