ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿರುವ ಭಾನುವಾರದ ಲಾಕ್ ಡೌನ್ ಉಲ್ಲಂಘಿಸಿದ 40ಕ್ಕೂ ಅಧಿಕ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ನಗರದಲ್ಲಿ ಲಾಕ್ ಡೌನ್ ಲೆಕ್ಕಿಸದೆ ಅನಾವಶ್ಯಕವಾಗಿ ಸಂಚರಿಸುತ್ತಿದ್ದ ಕಾರು, ಬೈಕ್, ಆಟೋ, ಒಟ್ಟು 45 ವಾಹನಗಳನ್ನು ವಶಕ್ಕೆ ಪಡೆದುಕೊಂಡು ಕೇಸ್ ದಾಖಲಿಸಲಾಗಿದೆ ಪಿಎಸ್‌ಐ ಮಂಜುನಾಥ ಎನ್. ಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.
ಇನ್ನು, ತಾಲೂಕಿನ ನಾರಾಯಣಪುರ ಸಮೀಪ ಅಕ್ರಮವಾಗಿ ಟ್ಯಾಕ್ಟರ್ ಮೂಲಕ ಮರಳು ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿ ಟ್ಯಾಕ್ಟರ್ ಚಾಲಕನ್ನು ಬಂಧಿಸಿ, ಟ್ಯಾಕ್ಟರ್ ವಶಕ್ಕೆ ಪಡೆದು ಕೇಸ್ ದಾಖಲಿಸಿಕೊಳ್ಳಲಾಗಿದೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093















