ಕಲ್ಪ ಮೀಡಿಯಾ ಹೌಸ್ | ಕೇಪ್ ಕೆನವೆರಲ್ |
ಸುಮಾರು 286 ದಿನಗಳ ಕಾಲ ತಾಂತ್ರಿಕ ಸಮಸ್ಯೆಯಿಂದ ಬಾಹ್ಯಾಕಾಶದಲ್ಲಿ ಸಿಲುಕಿ ತ್ರಿಶಂಕು ವಾಸದಲ್ಲಿದ್ದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರುಗಳು ಇಂದು ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.
ಸುಮಾರು 9 ತಿಂಗಳ ನಂತರ ಭಾರತೀಯ ಕಾಲಮಾನದಂತೆ ಇಂದು ಅಂದರೆ ಬುಧವಾರ ಬೆಳಗ್ಗೆ 3.27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.
Also Read>> ಗಮನಿಸಿ! ಯಶವಂತಪುರದಿಂದ ಹೊರಡುವ ಕೆಲವು ರೈಲುಗಳ ತಾತ್ಕಾಲಿಕ ಸಂಚಾರ ರದ್ದು, ಮಾರ್ಗ ಬದಲಾವಣೆ
9 ತಿಂಗಳ ಹಿಂದೆ ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ #SunitaWilliams ಮತ್ತು ಬುಚ್ ವಿಲ್ಮೋರ್ #ButchWilmore ಅವರು ಅಲ್ಲಿಗೆ ಪ್ರಯಾಣಿಸಿದ್ದರು. ಆದರೆ, ಅವರಿದ್ದ ಬೋಯಿಂಗ್ ಸ್ಟಾರ್ಲೈನರ್ ನೌಕೆಯಲ್ಲಿ ದೋಷ ಕಂಡುಬಂದಿತ್ತು. ಇದರಿಂದಾಗಿ ಸುನೀತಾ ಮತ್ತು ಸಹ ಗಗನಯಾತ್ರಿಗಳು ನೌಕೆಯ ಮೂಲಕ ಹಿಂತಿರುಗುವುದು ಅಪಾಯ ಎಂದು ನಾಸಾ ತಿಳಿಸಿತ್ತು.
ಹಾಗಾಗಿ, ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳುವುದನ್ನು ಕಾಯಲಾಗುತ್ತಿತ್ತು. ಈ ಕಾಯುವಿಕೆ ಇದೀಗ ಇಬ್ಬರೂ ಸುರಕ್ಷಿತವಾಗಿ ಮರಳುವುದರೊಂದಿಗೆ ಕೊನೆಗೊಂಡಿದೆ.
ಇದಲ್ಲದೆ, ಜೂನ್ 2024ರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಮರಳಿದ್ದಾರೆ.
Splashdown confirmed! #Crew9 is now back on Earth in their @SpaceX Dragon spacecraft. pic.twitter.com/G5tVyqFbAu
— NASA (@NASA) March 18, 2025
ಐಎಸ್’ಎಸ್ ಕ್ರೂ-9 ಸದಸ್ಯರನ್ನು ಹೊತ್ತ ಸ್ಪೇಸ್ ಎಕ್ಸ್ ಡ್ರಾö್ಯಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು.
ಇಳಿದಾಕ್ಷಣ ನಾಸಾ ವಿಜ್ಞಾನಿಗಳು ಅವರನ್ನು ಬರಮಾಡಿಕೊಂಡಿದ್ದು, ಸುನೀತಾ ವಿಲಿಯಮ್ಸ್ ನಸುನಕ್ಕಿದ್ದು, ಕೋಟ್ಯಾಂತರ ಭಾರತೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸೂಲ್ ಫ್ಲೋರಿಡಾದ ಸಮುದ್ರದ ಮೇಲೆ ಟಚ್‌ಡೌನ್ ಆಗಿದೆ. ಆಕಾಶದಿಂದ ವೇಗವಾಗಿ ಬರುವ ಕ್ಯಾಪ್ಸೂಲ್ ನಿಧಾನವಾಗಿ ಲ್ಯಾಂಡ್ ಆಯ್ತು. ಭೂಮಿ ಪ್ರವೇಶದ ಬಳಿಕ ಕ್ಯಾಪ್ಸೂಲ್‌ನಲ್ಲಿರುವ 4 ಪ್ಯಾರಾಚೂಟ್‌ಗಳು ತೆರೆದುಕೊಂಡಿತ್ತು. ಈ ಪ್ಯಾರಾಚೂಟ್‌ಗಳು ಕ್ಯಾಪ್ಸೂಲ್ ವೇಗವನ್ನು ತಗ್ಗಿಸಿತ್ತು. ವೇಗ ತಗ್ಗಿದಂತೆ ಕ್ಯಾಪ್ಸೂಲ್ ನಿಧನವಾಗಿ ಸಮುದ್ರದಲ್ಲಿ ಟಚ್‌ಡೌನ್ ಆಯ್ತು.
Welcome home, Commander @AstroHague 🇺🇸 pic.twitter.com/lqgcnXIbpy
— Rapid Response 47 (@RapidResponse47) March 18, 2025
ನಂತರ ವಿಶೇಷ ದೋಣಿಯಲ್ಲಿ ಸ್ಪೇಸ್ ಎಕ್ಸ್ ಸಿಬ್ಬಂದಿ ನೌಕೆಯನ್ನು ರೋಪ್ ಬಳಸಿ ಹತ್ತಿರದಲ್ಲೇ ಇದ್ದ ದೊಡ್ಡ ಬೋಟ್ ಬಳಿ ತಂದರು. ಈ ನೌಕೆಯನ್ನು ಕ್ರೇನ್ ಬಳಸಿ ಬೋಟ್ ಒಳಗಡೆ ಇಡಲಾಯಿತು. ಬೋಟ್ ಒಳಗಡೆ ಇಟ್ಟ ನಂತರ ಕ್ಯಾಪ್ಸೂಲ್ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್ ಎಕ್ಸ್ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ವಿಶೇಷವಾಗಿ ವಿನ್ಯಾಸ ಪಡಿಸಲಾಗಿರುವ ವೀಲ್ ಚೇರ್‌ನಲ್ಲಿ ಕುಳ್ಳಿರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post