ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಸುನೀತಾ ಅಣ್ಣಪ್ಪ ಹಾಗೂ ಉಪ ಮೇಯರ್ ಆಗಿ ಶಂಕರ್ ಗನ್ನಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.
ಪಾಲಿಕೆ ಸಭಾಂಗಣದಲ್ಲಿ ಇಂದು ಮಧ್ಯಾಹ್ನ ನಡೆದ ಅಯ್ಕೆ ಪ್ರಕ್ರಿಯೆಯಲ್ಲಿ ನಿರೀಕ್ಷೆಯಂತೆ ಸುನೀತಾ ಅಣ್ಣಪ್ಪ ಹಾಗೂ ಶಂಕರ್ ಗನ್ನಿ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರು ಘೋಷಣೆ ಮಾಡಿದರು.
ಇನ್ನು, ಉಪಮೇಯರ್ ಸ್ಥಾನಕ್ಕೆ ಬಿಜೆಪಿಯ ಶಂಕರ್ ಗನ್ನಿ ಅವರಿಗೆ 24 ಮತಗಳು ದೊರೆತಿದ್ದರೆ, ಇವರ ಪ್ರತಿಸ್ಪರ್ಧಿ ಆರ್.ಸಿ. ನಾಯ್ಕ ಅವರಿಗೆ 11 ಮತಗಳು ದೊರೆತಿವೆ.
ಈ ಸಂದರ್ಭದಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ನೂತನವಾಗಿ ಆಯ್ಕೆಯಾದ ಮೇಯರ್ ಮತ್ತು ಉಪಮೇಯರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಡಿಪ್ಲೊಮಾ ಇಂಜಿನೀಯರಿಂಗ್, ಎಂಕಾಂ ಪದವೀಧರೆಯಾಗಿದ್ದಾರೆ. 29ನೆಯ ವಾರ್ಡ್‌ನಿಂದ ಸತತವಾಗಿ ಮೂರು ಬಾರಿ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿರುವ ಸುನೀತಾ ಅಣ್ಣಪ್ಪ , ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ, ಬಿಜೆಪಿ ರಾಜ್ಯ ಮೀನುಗಾರರ ಪ್ರಕೋಷ್ಠದ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post