ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರಸಕ್ತ ಏಪ್ರಿಲ್ ನಿಂದ ಜೂನ್ ಮಾಹೆಯವರೆಗೆ ಮೂರು ತಿಂಗಳ ಕಾಲ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಪ್ರತಿ ತಿಂಗಳಿಗೆ 2.1 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ನಿಗದಿಪಡಿಸಲಾಗಿದೆ. ಇದನ್ನು 4.01 ಕೋಟಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿನ (ಎನ್‌ಎಫ್‌ಎಸ್‌ಎ) ಫಲಾನುಭವಿಗಳಿಗೆ ಉಚಿತವಾಗಿ ವಿತರಿಸಲಾಗುತ್ತದೆ.
ಕರ್ನಾಟಕದ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲು 2351 ಕೋಟಿ ರೂಪಾಯಿಗಳ ಒಟ್ಟು ವೆಚ್ಚವನ್ನು ಭಾರತ ಸರ್ಕಾರ ಭರಿಸುತ್ತಿದೆ. ಕರ್ನಾಟಕ ಸರ್ಕಾರ ಈ ಯೋಜನೆಯಡಿ 1735 ಕೋಟಿ ಮೌಲ್ಯದ 4.45 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ಮೇ 7 ರವರೆಗೆ ಎತ್ತುವಳಿ ಮಾಡಿದೆ.
ಲಾಕ್ ಡೌನ್ ಆದಾಗಿನಿಂದ ಕರ್ನಾಟಕವು 302 ರೈಲು ಲೋಡ್ ಅಂದರೆ 8.03 ಲಕ್ಷ ಮೆಟ್ರಿಕ್ ಟನ್ ತೂಕದ ಆಹಾರ ಧಾನ್ಯಗಳನ್ನು ಸ್ವೀಕರಿಸಿದೆ ಎಂದು ಭಾರತ ಆಹಾರ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ವಿ.ಪ್ರಸಾದ್ ಅವರು ದೃಢಪಡಿಸಿದ್ದಾರೆ.
ಇದು ಸುಮಾರು 1.60 ಕೋಟಿ ಚೀಲಗಳ 50 ಕೆಜಿ ಪ್ಯಾಕಿಂಗ್ ಆಗಿದೆ, ಈ ತಿಂಗಳಲ್ಲಿ ಮತ್ತೊಂದು 6.0 ಲಕ್ಷ ಮೆಟ್ರಿಕ್ ಟನ್’ಯನ್ನು ಸ್ವೀಕರಿಸಲಾಗುವುದು.
ಭಾರತೀಯ ಆಹಾರ ನಿಗಮದ ಕರ್ನಾಟಕ ಪ್ರದೇಶವು ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮತ್ತು ಸಾಮಾನ್ಯ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ರಾಜ್ಯದ ಅಗತ್ಯತೆಗಳನ್ನು ಪೂರೈಸಲು ಇದುವರೆಗೆ ಪ್ರತಿದಿನ 7.48 ಲಕ್ಷ ಚೀಲಗಳನ್ನು ಸ್ವೀಕೃತಿ ವಿತರಣೆಯನ್ನು ಮಾಡಿದೆ.
ಇದೇ ಅವಧಿಯಲ್ಲಿ, ಎನ್‌ಎಫ್‌ಎಸ್‌ಎ ಅಡಿಯಲ್ಲಿ ರಾಜ್ಯ ಸರ್ಕಾರವು 2.54 ಎಲ್‌ಎಂಟಿ ಆಹಾರ ಧಾನ್ಯಗಳನ್ನು ಸಹ ಎತ್ತುವಳಿ ಮಾಡಿದೆ. ವಿವಿಧ ಯೋಜನೆಗಳ ಅಡಿಯಲ್ಲಿ ವಿತರಣೆಗಾಗಿ ಲಾಕ್ ಡೌನ್ ಅವಧಿಯಲ್ಲಿ ಕರ್ನಾಟಕಕ್ಕೆ ಭಾರತ ಸರ್ಕಾರ ಪೂರೈಸಿದ ಒಟ್ಟು ಆಹಾರ ಧಾನ್ಯಗಳ ಪ್ರಮಾಣ 8.51 ಲಕ್ಷ ಮೆಟ್ರಿಕ್ ಟನ್. ಇದು ಸುಮಾರು 1.70 ಕೋಟಿ ಚೀಲಗಳ 50 ಕೆಜಿ ಪ್ಯಾಕಿಂಗ್ ಆಗಿದೆ.
ಭಾರತ ಆಹಾರ ನಿಗಮವು ಆಹಾರ ಧಾನ್ಯಗಳ ಖರೀದಿ, ಸಾಗಾಣಿಕೆ ಮತ್ತು ಸಂಗ್ರಹಣೆಯನ್ನು ನಿಕಟವಾಗಿ ಗಮನಿಸುತ್ತಿದೆ ಜೊತೆಗೆ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ನೀಡಲಾದ ಎಲ್ಲಾ ಆಹಾರ ಧಾನ್ಯಗಳನ್ನು ರಾಜ್ಯ ಸರ್ಕಾರವು ಸಮಯಕ್ಕೆ ಎತ್ತುವಳಿ ಮಾಡುವಂತೆ ನೋಡಿಕೊಳ್ಳುವುದರಿಂದ ರಾಜ್ಯದಲ್ಲಿ ಆಹಾರ ಧಾನ್ಯಗಳ ಸಮರ್ಪಕ ಲಭ್ಯತೆ ಇರುತ್ತದೆ ಹಾಗೂ ಆಹಾರ ಧಾನ್ಯಗಳು ಲಭ್ಯವಿಲ್ಲದ ಕಾರಣ ಯಾರಿಗೂ, ವಿಶೇಷವಾಗಿ ಯಾವುದೇ ಬಡ ಕುಟುಂಬಕ್ಕೆ ತೊಂದರೆಯಾಗಲು ಅವಕಾಶ ನೀಡುವುದಿಲ್ಲ ಎಂಬ ಉದ್ದೇಶವನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಭಾರತ ಆಹಾರ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ವಿ. ಪ್ರಸಾದ್ ತಿಳಿಸಿದ್ದಾರೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093
Discussion about this post