ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿರುವ ಅನೇಕ ಯೋಜನೆಗಳು ಬಡವರಿಗೆ ಸಹಕಾರಿಯಾಗಿದೆ. ಹೀಗೆಯೇ, ದೇಶದ ಉತ್ತಮ ಭವಿಷ್ಯಕ್ಕಾಗಿ ಮೋದಿಯವರನ್ನು ಬೆಂಬಲಿಸಿ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.
ಶಿವಮೊಗ್ಗ ಗ್ರಾಮಾಂತರದಲ್ಲಿದ ಮೈದೊಳಲು ಗ್ರಾಮದಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು.
ಮೈದೋಳಲು ಗ್ರಾಮದಲ್ಲಿ ಸಿಮೆಂಟ್ ರಸ್ತೆ, ಬಸ್ ನಿಲ್ದಾಣ, ಆಸ್ಪತ್ರೆ ಮೇಲ್ಛಾವಣಿ ಅಭಿವೃದ್ಧಿ, ಗ್ರಾಮೀಣ ಭಾಗದಲ್ಲಿ ನೀರಾವರಿ ಸೌಕರ್ಯ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಾನು ಸಂಸದನಾದ ನಂತರ ಮಾಡಿದ್ದೇನೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅನೇಕ ಯೋಜನೆಗಳು ಬಡವರ, ರೈತರ ಮನೆ ಸೇರಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ನೀಡಿರುವ ಅನೇಕ ಜನಪರ ಕಾರ್ಯಗಳು ಬಡವರ ಪಾಲಿಗೆ ವರದಾನವಾಗಿದೆ. ದೇಶದ ಉತ್ತಮ ಭವಿಷ್ಯಕ್ಕಾಗಿ, ಮಾದರಿ ಶಿವಮೊಗ್ಗ ಜಿಲ್ಲೆಯಾಗಿ ಹೊರಹೊಮ್ಮಲು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಮಾಡಲು ಬಿಜೆಪಿಯನ್ನು ಬೆಂಬಲಿಸುವಂತೆ ಕರೆ ನೀಡಿದರು.
ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್, ಜಿಲ್ಲಾ ಪಂಚಾಯತ್ ಸದಸ್ಯರಾದ ವೀರಭದ್ರಪ್ಪ ಪೂಜಾರ್, ಪಾಲಾಕ್ಷಪ್ಪ, ಜಗದೀಶ್ ಇನ್ನಿತರರು ಭಾಗಿಯಾಗಿದ್ದರು.
ಶಿವಮೊಗ್ಗ ಗ್ರಾಮಾಂತರ ಅರೆಬಿಳಚಿ ಅರಕೆರೆ ಕಲಿಹಾಳ್ ಮಾರ್ಶೆಟ್ಟಿ ಸರ್ಕಲ್ ಗ್ರಾಮದದಲ್ಲಿ ರಾಘವೇಂದ್ರ ಚುನಾವಣಾ ಪ್ರಚಾರ
Discussion about this post