ಕಲ್ಪ ಮೀಡಿಯಾ ಹೌಸ್ | ಸುರತ್ಕಲ್(ಮಂಗಳೂರು) |
ನಾಗಮಂಗಲ ಗಲಭೆ ಬೆನ್ನಲ್ಲೇ ಕರಾವಳಿಯಲ್ಲೂ ಸಹ ಇಂತಹುದ್ದೇ ಘಟನೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಸರತ್ಕಲ್ ಬಳಿಯ ಕಾಟಿಪಳ್ಳದ ಬದ್ರಿಯಾ ಮಸೀದಿ ಮೇಲೆ ರಾತ್ರಿ ಕಲ್ಲು ತೂರಾಟ ನಡೆದಿದೆ. ಪರಿಣಾಮವಾಗಿ ಮಸೀದಿಯ ಗಾಜುಗಳು ಪುಡಿಪುಡಿಯಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ನಿನ್ನೆ ರಾತ್ರಿ 10.30ರ ಸುಮಾರಿಗೆ 2 ಬೈಕ್’ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮಸೀದಿಗೆ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಹಿಂದೂ ಮುಖಂಡರ ವಿರುದ್ಧ ಕೇಸ್
ಇದೇ ವೇಳೆ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಿಎಚ್’ಪಿ ಹಾಗೂ ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ದ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post