ಕಲ್ಪ ಮೀಡಿಯಾ ಹೌಸ್ | ಸುರತ್ಕಲ್ |
ಹಿಂಬದಿಯಿಂದ ಬಂದ ಖಾಸಗಿ ಬಸ್ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸುರತ್ಕಲ್ ಮುಕ್ಕದಲ್ಲಿ ನಡೆದಿದೆ.
ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಎದುರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಎರಡೂ ಬಸ್ ಗಳಲ್ಲಿದ್ದ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
Also read: ಮತ ಎಣಿಕೆ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗದ ವಿವರ ಹೀಗಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post