ಇಂದೋರ್: 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನನಗೆ ಆರೋಗ್ಯ ಸ್ಥಿತಿ ಅಷ್ಟು ಉತ್ತಮವಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜಕೀಯ ನಿವೃತ್ತಿ ನಿರ್ಧಾರ ಕೈಗೊಂಡಿದ್ದೇನೆ ಎಂದರು.
It is the party which decides, but I have made up my mind not to contest next elections: External Affairs Minister and Vidisha MP Sushma Swaraj pic.twitter.com/G3cHC6pKGh
— ANI (@ANI) November 20, 2018
ಮಧ್ಯಪ್ರದೇಶದ ವಿದಿಶಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ 66 ವರ್ಷದ ಸುಷ್ಮಾ, ಹರಿಯಾಣ ಮೂಲದವರಾಗಿದ್ದು, ರಾಜಕೀಯ ಪ್ರವೇಶಕ್ಕೂ ಮೊದಲು ವಕೀಲ ವೃತ್ತಿಯಲ್ಲಿದ್ದರು.
ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿರುವ ಸುಷ್ಮಾ, 1977ರಲ್ಲಿ 25 ನೆಯ ವಯಸ್ಸಿಗೆ ಹರಿಯಾಣದ ಅತ್ಯಂತ ಕಿರಿಯ ಸಂಪುಟ ಸಚಿವೆ ಎಂಬ ಹೆಸರು ಪಡೆದಿದ್ದರು.
ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಮಾಹಿತಿ ಪ್ರಸಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಸುಷ್ಮಾ ಸ್ವರಾಜ್, ಪ್ರಸ್ತುತ ಮೋದಿ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Discussion about this post