ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ |
ಪಶ್ಚಿಮ ಬಂಗಾಳದಲ್ಲಿ #WestBengal ಬಿಜೆಪಿಯ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ದೇಶದ ಭದ್ರತೆ ದೃಷ್ಠಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದ್ದು, ಬಾಂಗ್ಲಾದೇಶದ ಗಡಿ ಬೇಲಿಗಾಗಿ ಭೂಮಿಯನ್ನು ಗಡಿ ಭದ್ರತಾ ಪಡೆಗೆ #BorderSecurityForce ಹಸ್ತಾಂತರಿಸಲು ಮುಖ್ಯಮಂತ್ರಿ ಸುವೇಂದ್ರ ಅಧಿಕಾರಿ ನೇತೃತ್ವದ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಸಿಎಂ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಭಾರತ-ಬಾಂಗ್ಲಾದೇಶ #Bangladesh ಗಡಿ ಪ್ರದೇಶದಲ್ಲಿ ಬೇಲಿ ನಿರ್ಮಾಣ ಕಾರ್ಯ ಕೈಗೊಳ್ಳಲು ಗಡಿ ಭದ್ರತಾ ಪಡೆಗೆ ಭೂಮಿ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ.
Also Read>> ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ತುಟ್ಟಿ ಭತ್ಯೆ ಹೆಚ್ಚಳ | ಎಂದಿನಿಂದ ಪೂರ್ವಾನ್ವಯ?
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಸುವೇಂದು ಅಧಿಕಾರಿ, #India ಭಾರತ-ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿ ಬೇಲಿ ನಿರ್ಮಾಣಕ್ಕಾಗಿ ಸುಮಾರು 105 ಎಕರೆ ಭೂಮಿಯನ್ನು ಕೇಂದ್ರಕ್ಕೆ ವರ್ಗಾಯಿಸಲು ಒಪ್ಪಿಗೆ ನೀಡಲಾಗಿದೆ. ಈ ಪ್ರಕ್ರಿಯೆಯು ಮೇ 11 ರಿಂದ ಪ್ರಾರಂಭವಾಗಿ 45 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಭೂಮಿ ಹಸ್ತಾಂತರ ಪ್ರಕ್ರಿಯೆ ವಿಳಂಬಗೊಂಡಿತ್ತು. ಆದರೆ, ನಮ್ಮ ಸರ್ಕಾರ ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.
ಅಂತಾರಾಷ್ಟ್ರೀಯ ಗಡಿ ಪ್ರದೇಶವಾದ ಕಾರಣ ಇಲ್ಲಿ ಅಕ್ರಮ ನುಸುಳುಕೋರರ ತಡೆ ಹಾಗೂ ದೇಶದ ಭದ್ರತೆ ದೃಷ್ಠಿಯಿಂದ ಗಡಿಯಲ್ಲಿ ಫೆನ್ಸಿಂಗ್ #Fencing ಹಾಕುವುದು ಅತ್ಯಗತ್ಯವಾಗಿದೆ. ಈ ಕೆಲಸವನ್ನು ಆದಷ್ಟು ಶೀಘ್ರ ಮುಕ್ತಾಯಗೊಳಿಸಲಾಗುತ್ತದೆ ಎಂದರು.
Also Read>> ಪೆಟ್ರೋಲ್ ಬಂಕ್’ಗಳಿಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ | ಉಲ್ಲಂಘಿಸಿದ್ರೆ ಕಠಿಣ ಕ್ರಮ
ಮೊದಲ ಸಂಪುಟದಲ್ಲಿ ಇವುಗಳಿಗೆ ಗ್ರೀನ್ ಸಿಗ್ನಲ್
- ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಜಾರಿ
- ಪ್ರಧಾನ ಮಂತ್ರಿ ಉಜ್ವಲ ಯೋಜನೆ 3.0 ಜಾರಿ
- ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳನ್ನು ಜಾರಿ
- ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ವಯೋಮಿತಿಯಲ್ಲಿ ಐದು ವರ್ಷಗಳ ಸಡಿಲಿಕೆ
- ರಾಜ್ಯದಲ್ಲಿ ಭಾರತೀಯ ನ್ಯಾಯ ಸಂಹಿತೆ ಜಾರಿ
- ಜೂನ್ 2025 ರ ಜನಗಣತಿ ಪ್ರಕ್ರಿಯೆ ತಕ್ಷಣವೇ ಪ್ರಾರಂಭ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Comments 1