ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಹುಬ್ಬಳ್ಳಿ ನೈಋತ್ಯ ರೈಲ್ವೆಯ (SWR Hubballi) ಪ್ರಧಾನ ಕಚೇರಿಯಾದ ರೈಲ್ ಸೌಧದಲ್ಲಿ ‘ವಿಜಿಲೆನ್ಸ್ ಜಾಗೃತಿ ಅರಿವು ಸಪ್ತಾಹ–2026’ಕ್ಕೆ ಚಾಲನೆ ನೀಡಲಾಯಿತು. ಅಕ್ಟೋಬರ್ 26ರಿಂದ ನವೆಂಬರ್ 1ರವರೆಗೆ ದೇಶಾದ್ಯಂತ ನಡೆಯುತ್ತಿರುವ ಸಪ್ತಾಹವನ್ನು ‘ಜಾಗೃತಿ: ಸಮೃದ್ಧಿಗಾಗಿ ಪ್ರಾಮಾಣಿಕತೆ’ (Vigilance Probity for Prosperity) ಎಂಬ ಘೋಷವಾಕ್ಯದಡಿ ಆಚರಿಸಲಾಗುತ್ತಿದೆ.
ಅಧಿಕಾರಿಗಳು, ಸಿಬ್ಬಂದಿಗೆ ಪ್ರಾಮಾಣಿಕತೆಯ ಪ್ರತಿಜ್ಞೆ
ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಅವರು ಪ್ರಧಾನ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರಾಮಾಣಿಕತೆಯ ಪ್ರತಿಜ್ಞೆಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೈತಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಬ್ಬರ ಪಾತ್ರವೂ ಮಹತ್ವದ್ದಾಗಿದೆ. ದೈನಂದಿನ ಕಾರ್ಯನಿರ್ವಹಣೆಯಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯನ್ನು ಉತ್ತೇಜಿಸಲು ರೈಲ್ವೆ ನೌಕರರು, ವಿವಿಧ ಪಾಲುದಾರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ತಿಳಿಸಿದರು.
ಭ್ರಷ್ಟಾಚಾರ ತಡೆಗಟ್ಟುವುದು ಕೇವಲ ಒಬ್ಬರ ಜವಾಬ್ದಾರಿಯಲ್ಲ. ನೈತಿಕ ಮೌಲ್ಯಗಳನ್ನು ಕಾಪಾಡಲು ಪ್ರತಿಯೊಬ್ಬರೂ ಸಾಮೂಹಿಕ ಜಾಗೃತಿಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಕರೆ ನೀಡಿದರು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಪ್ರಧಾನ ವ್ಯವಸ್ಥಾಪಕರು ಹಾಗೂ ಹಿರಿಯ ಅಧಿಕಾರಿಗಳು ರೈಲ್ ಸೌಧದ ಆವರಣದಲ್ಲಿರುವ ಇಂಟೆಗ್ರಿಟಿ ಗಾರ್ಡನ್ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
Also Read>> ಮಧ್ಯ ಕರ್ನಾಟಕದಲ್ಲೇ ಮೊದಲು | ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಲೀಡ್’ಲೆಸ್ ಪೇಸ್’ಮೇಕರ್ ಅಳವಡಿಕೆ ಯಶಸ್ವಿ
SWR Hubballi: ಬೀದಿ ನಾಟಕ, ಸ್ಪರ್ಧೆ ಮತ್ತು ಸಹಿ ಅಭಿಯಾನ
ವಿಜಿಲೆನ್ಸ್ ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟದ ಕುರಿತು ಸಾರ್ವಜನಿಕರಲ್ಲಿ ಅರಿವು
ಮೂಡಿಸಲು ಸಪ್ತಾಹದ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೀದಿ ನಾಟಕ, ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಹಾಗೂ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಸಹಿ ಅಭಿಯಾನ ಸೇರಿದಂತೆ ವಿವಿಧ ಜಾಗೃತಿ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.
ನೈಋತ್ಯ ರೈಲ್ವೆಯ ಎಲ್ಲಾ ವಿಭಾಗಗಳು, ಘಟಕಗಳು ಮತ್ತು ಕಚೇರಿಗಳಲ್ಲಿಯೂ ವಿಜಿಲೆನ್ಸ್ ಜಾಗೃತಿ ಅರಿವು ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ‘ಸತ್ಯನಿಷ್ಠಾ ಪ್ರತಿಜ್ಞೆ’ ಬೋಧಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










