ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ನೈರುತ್ಯ ರೈಲ್ವೆಯು #SWR ಯಶವಂತಪುರ ಮತ್ತು ಹೊಸಪೇಟೆ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, ವಿವರಗಳು ಇಂತಿವೆ.
06533 ಸಂಖ್ಯೆಯ ಯಶವಂತಪುರ-ಹೊಸಪೇಟೆ ವಿಶೇಷ ಎಕ್ಸ್’ಪ್ರೆಸ್ ರೈಲು, ಬುಧವಾರ, ಮಾರ್ಚ್ 18, 2026 ರಂದು ಸಂಜೆ 6:15ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 4:00 ಗಂಟೆಗೆ ಹೊಸಪೇಟೆಯನ್ನು #Hospet ತಲುಪಲಿದೆ.
06534 ಸಂಖ್ಯೆಯ ಹೊಸಪೇಟೆ-ಯಶವಂತಪುರ #Yeshwantpur ವಿಶೇಷ ಎಕ್ಸ್’ಪ್ರೆಸ್ ರೈಲು, ಗುರುವಾರ, ಮಾರ್ಚ್ 19, 2026 ರಂದು ಬೆಳಿಗ್ಗೆ 9:00 ಗಂಟೆಗೆ ಹೊಸಪೇಟೆಯಿಂದ ಹೊರಟು, ಅದೇ ದಿನ ರಾತ್ರಿ 7:20ಕ್ಕೆ ಯಶವಂತಪುರ ತಲುಪಲಿದೆ.
ಈ ವಿಶೇಷ ರೈಲುಗಳಿಗೆ ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್ ಮತ್ತು ತೋರಣಗಲ್ಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.
ಈ ರೈಲಿನಲ್ಲಿ ಒಟ್ಟು 21 ಬೋಗಿಗಳಿರಲಿದ್ದು, ಇದರಲ್ಲಿ ಎರಡು ಎಸಿ 2-ಟೈರ್ ಬೋಗಿಗಳು, ಆರು ಎಸಿ 3-ಟೈರ್ ಬೋಗಿಗಳು, ಏಳು ಸ್ಲೀಪರ್ ಕ್ಲಾಸ್ ಬೋಗಿಗಳು, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು ಎರಡು ಲಗೇಜ್/ಬ್ರೇಕ್ ವ್ಯಾನ್’ಗಳು ಇರಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















