ಕಲ್ಪ ಮೀಡಿಯಾ ಹೌಸ್ | ತಿ.ನರಸೀಪುರ |
ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ GST ರೂಪದಲ್ಲಿ ವಸೂಲಿ ಮಾಡುವ ಹಣದ ಲೆಕ್ಕಾಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ Siddaramaiah ಅವರು ಬಹಿರಂಗ ಸಭೆಯಲ್ಲಿ ಸಾರ್ವಜನಿಕರ ಮುಂದೆ ಸೊಗಸಾಗಿ ತಮ್ಮದೇ ಶೈಲಿಯಲ್ಲಿ ಮಂಡಿಸಿದರು.
ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರ ಒಂದೂವರೆ ಲಕ್ಷ ರೂಪಾಯಿ ಕೊಡುತ್ತದೆ. ರಾಜ್ಯ ಸರ್ಕಾರ ಒಂದು ಲಕ್ಷ 28 ಸಾವಿರ ಕೊಡುತ್ತಿತ್ತು. ಉಳಿದ 3.80 ಲಕ್ಷ ರೂಪಾಯಿಯನ್ನು ಫಲಾನುಭವಿ ಕೊಡಬೇಕು. ಆಗ ಅವರಿಗೆ ಮನೆ ಸಿಗುತ್ತದೆ. ಆದರೆ ಕೇಂದ್ರ ಸರ್ಕಾರ ಪ್ರತಿ ಮನೆಗೆ 18% GST ವಸೂಲಿ ಮಾಡುತ್ತದೆ. ಅಂದರೆ ಪ್ರತಿ ಕೊಳೆಗೇರಿ ಮನೆಗೆ 1 ಲಕ್ಷದ 38 ಸಾವಿರ ರೂಪಾಯಿಯನ್ನು GST ಹೆಸರಲ್ಲಿ ಕೇಂದ್ರ ಸರ್ಕಾರ ವಾಪಾಸ್ ಪಡೆದುಕೊಳ್ಳುತ್ತದೆ.

ಕೊಳೆಗೇರಿ ನಿವಾಸಿಗಳಿಂದಲೂ 18% GST ಸುಲಿಗೆ ಮಾಡುವ ಈ ಕ್ರಮ ನನಗೆ ಬಹಳ ಬೇಸರ ಆಯಿತು. ಹೀಗಾಗಿ ಪ್ರತಿ ಫಲಾನುಭವಿಗಳು ಕಟ್ಟಬೇಕಿದ್ದ ಅವರ ಪಾಲಿನ 3 ಲಕ್ಷ 80 ಸಾವಿರ ರೂಪಾಯಿಯಲ್ಲಿ ಒಂದು ಲಕ್ಷ ಮಾತ್ರ ಅವರಿಂದ ಕಟ್ಟಿಸಿಕೊಂಡು ಉಳಿದ ಹಣವನ್ನು ನಮ್ಮ ಸರ್ಕಾರದಿಂದಲೇ ಕಟ್ಟಿಸಲು ನಾನು ನಿರ್ಧರಿಸಿದೆ.

Also read: ಸನಾತನ ಪರಂಪರೆಗೆ ನೃಸಿಂಹ ಭಾರತೀ ಶ್ರೀಗಳ ಕೊಡುಗೆ ಅನನ್ಯ: ಶೃಂಗೇರಿ ವಿಧುಶೇಖರ ಶ್ರೀ ಶ್ಲಾಘನೆ
ಹಾಗೆಯೇ ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆ ಹಣ 4 ಲಕ್ಷ ಕೋಟಿ. ಇದರಲ್ಲಿ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 53 ಸಾವಿರ ಕೋಟಿ. ಇದು ಅನ್ಯಾಯ ಅಲ್ವಾ? ಈ ಅನ್ಯಾಯಕ್ಕೆ ಬಿಜೆಪಿಗೆ ಮತ ಹಾಕ್ಬೇಕಾ ಎಂದು ಪ್ರಶ್ನಿಸಿದರು.

ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿ ಕೇಂದ್ರದ ಮೋದಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಅನ್ನು ಬಲಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post