ಕಲ್ಪ ಮೀಡಿಯಾ ಹೌಸ್ | ತಿ.ನರಸೀಪುರ |
ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ ವಾಸ್ತವದ ಮನವರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ನುಡಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿನ ನರಸೀಪುರ ವಿಧಾನಸಭಾ ಕ್ಷೇತ್ರದ ತಿ.ನರಸೀಪುರದಲ್ಲಿ ನಡೆದ ಸುನಿಲ್ ಬೋಸ್ ಪರ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿರುವ ಕಪ್ಪು ಹಣವನ್ನೆಲ್ಲಾ ಕರಗಿಸ್ತೀನಿ ಎಂದು ಹೇಳಿ ಡಿಮಾನೆಟೈಸೇಷನ್ ಮಾಡಿದರು. ಆದರೆ ಇದರಿಂದ ಕಪ್ಪು ಹಣ ಕರಗಲಿಲ್ಲ. ಇದರಿಂದ ಲಾಭ ಆಗಿದ್ದು ಅಂಬಾನಿ-ಅದಾನಿಗೆ ಮಾತ್ರ. ನೋಟು ನಿಷೇಧಕ್ಕೂ ಮೊದಲು ಇವರ ಬಳಿ ಇದ್ದ ಆಸ್ತಿ, ನೋಟು ನಿಷೇಧದ ಬಳಿಕ ಅವರ ಆಸ್ತಿಯಲ್ಲಿ ಆದ ಏರಿಕೆಯನ್ನು ನೀವೇ ತುಲನೆ ಮಾಡಿ ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.

Also read: ಉಸಿರಾಡುವುದಕ್ಕೆ ಒಂದನ್ನು ಬಿಟ್ಟು ಮಿಕ್ಕೆಲ್ಲವುಕ್ಕೂ ಮೋದಿ ಟ್ಯಾಕ್ಸ್ ಹಾಕಿದ್ದಾರೆ: ಪ್ರಿಯಾಂಕ್ ಖರ್ಗೆ
ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಂದ್ರು. ಆಯ್ತಾ ಯಾರದ್ದಾದರೂ ವಿಕಾಸ? ಅಚ್ಛೆ ದಿನ್ ಆಯೆಗಾ ಅಂದರು, ನಿಮ್ಮಲ್ಲಿ ಯಾರ ಬದುಕಲ್ಲಾದರೂ ಅಚ್ಚೆ ದಿನ್ ಬಂತಾ ಎಂದು ಪ್ರಶ್ನಿಸಿದರು.

ಕ್ಷೇತ್ರದ ಶಾಸಕರೂ ಸಮಾಜ ಕಲ್ಯಾಣ ಸಚಿವರೂ ಆದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post