No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಿವಮೊಗ್ಗ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆಗೆ ಕಠಿಣ ಕ್ರಮ ಕೈಗೊಳ್ಳಿ: ಡಿಸಿಗೆ ಸಿಎಂ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 11, 2021
in ಶಿಕಾರಿಪುರ
0
ಶಿವಮೊಗ್ಗ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆಗೆ ಕಠಿಣ ಕ್ರಮ ಕೈಗೊಳ್ಳಿ: ಡಿಸಿಗೆ ಸಿಎಂ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿಕಾರಿಪುರ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆಯಾಗಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಇಳಿಕೆಯಾಗಿಲ್ಲ. ಹೀಗಾಗಿ, ಇದರ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆ ಮಾಡಲು ಎಲ್ಲ ರೀತಿಯ ಕಠಿಣ ಕ್ರಮಕೈಗೊಳ್ಳಿ ಎಂದು ಸೂಚನೆ ನೀಡಿದರು.

ಇನ್ನು, ಮುಂದಿನ ಎರಡು ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದೆ ಎಂದರು.

ಸಂಕಷ್ಟದಲ್ಲಿರುವ ವಿವಿಧ ವರ್ಗಗಳ ಜನರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಬಿಡುಗಡೆ ಮಾಡಲಾಗುತ್ತಿದ್ದು, ಇದನ್ನು ಬ್ಯಾಂಕುಗಳು ಹಳೆ ಸಾಲಕ್ಕೆ ಮುರಿದುಕೊಳ್ಳದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಕೋವಿಡ್ ಮುಂದಿನ ಒಂದು ವಾರದಲ್ಲಿ ಹತೋಟಿಗೆ ಬರುವ ನಿರೀಕ್ಷೆ ಹೊಂದಲಾಗಿದೆ. ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರೋನಾ ಪ್ರಮಾಣ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಕರೋನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು ಎಂದು ಮನವಿ ಮಾಡಿದರು.

ಕೋವಿಡ್‍ನಿಂದ ಸಂಕಷ್ಟಕ್ಕೆ ಒಳಗಾದ ಹಲವು ವರ್ಗಗಳ ಜನರಿಗೆ ಸರ್ಕಾರ ಈಗಾಗಲೇ ಆರ್ಥಿಕ ನೆರವು ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಫಲಾನುಭವಿಗಳ ಹಳೆ ಸಾಲ ಬಾಕಿಯನ್ನು ಬ್ಯಾಂಕುಗಳು ಯಾವುದೇ ಕಾರಣಕ್ಕೂ ಈ ಹಣದಿಂದ ಮುರಿದುಕೊಳ್ಳಬಾರದು. ಈ ರೀತಿ ಹಳೆ ಸಾಲ ಚುಕ್ತಾ ಮಾಡುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.


ಶಿಕಾರಿಪುರ ತಾಲೂಕಿನ ಪ್ರಮುಖ ನೀರಾವರಿ ಯೋಜನೆಗಳು ಬಹುತೇಕ ಅಂತಿಮ ಹಂತದಲ್ಲಿವೆ. ಈ ಯೋಜನೆಗಳ ಮೂಲಕ ಬರಪೀಡಿತವಾಗಿರುವ ಉಡುಗುಣಿ, ತಾಳಗುಂದ ಮತ್ತು ಹೊಸೂರು ಹೋಬಳಿಗಳ ಬಹುತೇಕ ಕೆರೆಗಳನ್ನು ಈ ಮಳೆಗಾಲದಲ್ಲಿ ತುಂಬಿಸುವ ವಿಶ್ವಾಸ ನನಗಿದೆ. ಶೇ.90ರಷ್ಟು ಕಾಮಗಾರಿಗಳು ಈಗಾಗಲೇ ಮುಗಿದಿದ್ದು, ಈ ಭಾಗದ ಹಲವು ವರ್ಷಗಳ ಕನಸು ಇದರಿಂದ ನನಸಾಗಲಿದೆ ಎಂದರು.
ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗಾಗಿ ದೊಡ್ಡ ಪ್ರಮಾಣದಲ್ಲಿ ಅನುದಾನ ಒದಗಿಸಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಹಳಿ ನಿರ್ಮಾಣ ಯೋಜನೆಯನ್ನು ತ್ವರಿತಗೊಳಿಸಬೇಕು. ಭೂಸ್ವಾಧೀನ ಪ್ರಕ್ರಿಯೆಯನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ ಯೋಜನೆ ಅನುಷ್ಟಾನಗೊಳಿಸಬೇಕು. ತಾಲೂಕಿನಲ್ಲಿ ಮಂಜೂರಾಗಿರುವ 10ಕೆವಿ ವಿದ್ಯುತ್ ಸ್ಟೇಷನ್‍ಗಳ ನಿರ್ಮಾಣ ಕಾರ್ಯವನ್ನು ಸಹ ಚುರುಕುಗೊಳಿಸಬೇಕು ಎಂದು ಸೂಚನೆ ನೀಡಿದರು.

ತಾಲೂಕಿನ ಪ್ರತಿಯೊಬ್ಬರ ಅರ್ಹ ಬಡವರಿಗೂ ಮನೆ ನಿರ್ಮಿಸಿ ನೀಡಬೇಕು. ಇದಕ್ಕಾಗಿ ಆಶ್ರಯ ನಿವೇಶನ ಲಭ್ಯವಿಲ್ಲದಿದ್ದರೆ, ನಿವೇಶನ ಖರೀದಿಸಲು ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಸೇರಿದಂತೆ ಪ್ರತಿ ಅರ್ಹರಿಗೂ ಮನೆಯನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಬಿತ್ತನೆ ಬೀಜ ರಸಗೊಬ್ಬರ ಪೂರೈಕೆ: ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗದಂತೆ ಕ್ರಮ ಕೈಗೊಳ್ಳಬೇಕು. ಸಹಕಾರ ಸಂಘಗಳ ಮೂಲಕ ರೈತರಿಗೆ ಸಾಲ ಸೌಲಭ್ಯ ಸಕಾಲದಲ್ಲಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ತಾಲೂಕಿನಲ್ಲಿ ಹಲವು ನೀರಾವರಿ ಯೋಜನೆಗಳು ನಿರೀಕ್ಷೆಯಂತೆ ಅನುಷ್ಟಾನಗೊಳ್ಳುತ್ತಿದೆ. ಉಡುಗುಣಿ ತಾಳಗುಂದ ಏತ ನೀರಾವರಿ ಯೋಜನೆ ಮುಂದಿನ ತಿಂಗಳು ಪೂರ್ಣಗೊಳ್ಳಲಿದೆ. ಕಸಬಾ ನೀರಾವರಿ ಯೋಜನೆ ಶೇ.50ರಷ್ಟು ಪೂರ್ಣಗೊಂಡಿದೆ. ಹೊಸಳ್ಳಿ-ಅಂಜನಾಪುರ ಯೋಜನೆಯ ಪೈಪ್‍ಲೈನ್ ಕಾರ್ಯ ನಡೆಯುತ್ತಿದೆ. ಯೋಜನೆಗೆ ಯಾವುದೇ ಆರ್ಥಿಕ ಅಡಚಣೆ ಇರುವುದಿಲ್ಲ. ತಾಲೂಕಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಇದುವರೆಗೆ ತಾಲೂಕಿನಲ್ಲಿ 45ಸಾವಿರ ಮಂದಿಗೆ ಪ್ರಥಮ ಡೋಸ್ ಮತ್ತು 5ಸಾವಿರ ಮಂದಿಗೆ ಎರಡನೇ ಡೋಸ್ ನೀಡಲಾಗಿದೆ ಎಂದರು.

ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜು, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM B S YediyurappaCovid Positivity RateLatest News KannadaLocal NewsMalnad NewsShikaripuraShimogaShivamoggaಕೋವಿಡ್ ಪಾಸಿಟಿವಿಟಿ ರೇಟ್ಬಿ.ಎಸ್. ಯಡಿಯೂರಪ್ಪಮಲೆನಾಡು ಸುದ್ಧಿಶಿಕಾರಿಪುರಶಿವಮೊಗ್ಗಶಿವಮೊಗ್ಗ ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಷ್ಟದಲ್ಲಿರುವ ಜನತೆಗೆ ಸದಾ ಸ್ಪಂದಿಸುತ್ತಿರುವುದು ಶ್ಲಾಘನೀಯ ಕಾರ್ಯ: ಕೆ.ಇ. ಕಾಂತೇಶ್

Next Post

ವಿದೇಶದಲ್ಲಿರುವ ಕನ್ನಡಿಗರಿಂದ ಮೆಗ್ಗಾನ್ ಆಸ್ಪತ್ರೆಗೆ ಬರಲಿದೆ 3 ಕೋಟಿ ರೂ. ವೆಚ್ಚದ ಕೋವಿಡ್ ಉಪಕರಣಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದೇಶದಲ್ಲಿರುವ ಕನ್ನಡಿಗರಿಂದ ಮೆಗ್ಗಾನ್ ಆಸ್ಪತ್ರೆಗೆ ಬರಲಿದೆ 3 ಕೋಟಿ ರೂ. ವೆಚ್ಚದ ಕೋವಿಡ್ ಉಪಕರಣಗಳು

ವಿದೇಶದಲ್ಲಿರುವ ಕನ್ನಡಿಗರಿಂದ ಮೆಗ್ಗಾನ್ ಆಸ್ಪತ್ರೆಗೆ ಬರಲಿದೆ 3 ಕೋಟಿ ರೂ. ವೆಚ್ಚದ ಕೋವಿಡ್ ಉಪಕರಣಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

June 15, 2026
Narayana Health Kalyana Karnataka

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

June 15, 2026
Narayana Super Specialty Clinic Shivamogga

ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಎಂಡೋಸ್ಕೋಪಿ, ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ

June 15, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ | ಸಂಸದ ರಾಘವೇಂದ್ರ ಹೇಳಿದ್ದೇನು?

June 15, 2026
ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL