ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತಮಿಳುನಾಡು: ದೇಶದಾದ್ಯಂತ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ನಿಯಂತ್ರಣಕ್ಕಾಗಿ ರಾಜ್ಯಗಳು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿವೆ. ಅದರಂತೆ ಜಿಲ್ಲಾಧಿಕಾರಿ ಒಬ್ಬರು ಮಾಸ್ಕ್ ಧರಿಸದವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ತಮಿಳುನಾಡಿನ ನಿಲಗಿರೀಸ್ ಜಿಲ್ಲೆ ಪ್ರಮುಖ ಪ್ರವಾಸಿ ತಾಣವೂ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದು, ಹೊರ ರಾಜ್ಯಗಳಿಂದ ಬರುವವರಿಂದಲೇ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಂತಹ ನಿಯಮ ಜಾರಿಗೆ ತಂದಿದೆ ಎನ್ನಲಾಗುತ್ತಿದೆ.
ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಕೊರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದೆ. ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿಯೂ ಕೊರೊನಾ ಭೀತಿ ಎದುರಾಗಿದೆ. ಅದರಲ್ಲೂ ಕರ್ನಾಟಕದಲ್ಲಿ ಈಗಾಗಲೇ ೨ನೇ ಅಲೆ ಹೆಚ್ಚಿದ್ದು, ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನೂ ಹೊರಡಿಸಿದೆ. ಈ ನಡುವಲ್ಲೇ ಇದೀಗ ತಮಿಳುನಾಡು ರಾಜ್ಯದ ನೀಲಗಿರೀಸ್ ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಮಾಸ್ಕ್ ಧರಿಸದವರ ವಿರುದ್ದ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ.
ನಿಲಗೀರಿಸ್ ಜಿಲ್ಲೆಯ ಜಿಲ್ಲಾಧಿಕಾರಿ ಜೆ. ಇನ್ನೋಸೆಂಟ್ ದಿವ್ಯಾ ಅವರು ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೆ ತಂದಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ 200 ರೂಪಾಯಿ ದಂಡ ಹಾಗೂ 6 ತಿಂಗಳು ಜೈಲು ಶಿಕ್ಷೆ ವಿಧಿಸುವ ಕುರಿತಂತೆ ಆದೇಶ ಹೊರಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post