ಕಲ್ಪ ಮೀಡಿಯಾ ಹೌಸ್ | ತರೀಕೆರೆ |
ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ.
ಶಿವಮೊಗ್ಗದಿಂದ ತರೀಕೆರೆ ಕಡೆಗೆ ಚಲಿಸುತ್ತಿದ್ದ ಸಾರಿಗೆ ಬಸ್ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಎದುರಿಗೆ ಬಂದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 9 ಮಂದಿಗೆ ಗಂಭೀರ ಗಾಯಗಳಾಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರಿನಲ್ಲಿದ್ದವರು ಭದ್ರಾವತಿ ಮೂಲದವರು ಎಂದು ಗುರುತಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post