ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ಇಂದು ನೀರು ಹರಿಸಲಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ.
ವಿಶ್ವೇಶ್ವರಯ್ಯ ಜಲ ನಿಗಮದ ಅಡಿಯಲ್ಲಿ ಬರುವ, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯ ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾದುಹೋಗಿದ್ದು, ಶಾಂತಿಪುರ ಪಂಪ್‌ಹೌಸ್-1 ಜಂಬದಹಳ್ಳಿ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೇಕೆರೆ ಪಂಪ್‌ಹೌಸ್-2, ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಬ್ಬೂರು ಗ್ರಾಮದ ಹತ್ತಿರವಿರುವ ವೈಜಂಕ್ಷನ್‌ನಿಂದ ಹಳ್ಳದ ಮುಖಾಂತರ ಕಡೂರು ತಾಲೂಕಿನ ಕುಕ್ಕೆ ಸಮುದ್ರ ಕೆರೆಯ ಮೂಲಕ ವೇದಾವತಿ ನದಿಯ ಮುಖಾಂತರ ವಾಣಿವಿಲಾಸ ಸಾಗರಕ್ಕೆ ಸರ್ಕಾರದ ನಿರ್ದೇಶನದಂತೆ ಸೆ.4ರ ಇಂದು ನೀರು ಹರಿಸಲಾಗುವುದು.
ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು, ತೋಟಗಾರಿಕೆ ಮಾಡುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದು ಇತ್ಯಾದಿಗಳನ್ನು ನಿರ್ಬಂಧಿಸಲಾಗಿದೆ ಹಾಗೂ ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧೀಕೃತವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರವಾಗುತ್ತದೆಯೆಂದು ವಿಜನಿನಿ ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post