No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಮರ್ಶೆಯ ವಿವೇಕದಿಂದ ಜ್ಞಾನದ ಬೆಳಕು ಹರಡಲಿ: ರಾಶಿಸ ಕಾರ್ಯದರ್ಶಿ ನಾಗರಾಜ ಸಲಹೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

kalpa News by kalpa News
September 5, 2026
in ಶಿವಮೊಗ್ಗ
0
Teachers Day Celebration - National Pharmacy College
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಂತ್ರಜ್ಞಾನ ಮತ್ತು ಎಐ ನೀಡುವ ಮಾಹಿತಿಯನ್ನು ಅಂಧತ್ವದಲ್ಲಿ ಸ್ವೀಕರಿಸದೆ, ವಾಸ್ತವತೆಯನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿ ಮನವರಿಕೆಯಾದ ವಿಚಾರಗಳನ್ನು ಸ್ವೀಕರಿಸುವ ಚಿಂತನಾ ಮನೋಭಾವ ಶಿಕ್ಷಕರಲ್ಲಿ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಸಲಹೆ ಅಭಿಪ್ರಾಯಪಟ್ಟರು.

ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿದರು.Kumadvathi College Shikariura

ತಂತ್ರಜ್ಞಾನ ನೀಡಲಾಗದ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ನೈತಿಕತೆ, ಸ್ಫೂರ್ತಿ ಮತ್ತು ಮಾನವೀಯತೆ ಯಂತಹ ಜೀವನ ಮೌಲ್ಯಗಳನ್ನು ಬೆಳೆಸುವ ಕೌಶಲ್ಯ ಶಿಕ್ಷಕರಲ್ಲಿ ಇರಬೇಕು. ಮಾಹಿತಿ ನೀಡುವುದು ಮಾತ್ರ ಶಿಕ್ಷಕರ ಕಾರ್ಯವಲ್ಲ, ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸಿ, ಬದುಕಿನ ದಾರಿಯನ್ನು ತೋರಿಸುವುದು ಶಿಕ್ಷಕರ ನಿಜವಾದ ಕರ್ತವ್ಯ. ವಿದ್ಯಾರ್ಥಿಗಳ ಬದುಕಿನ ಅಂಧಕಾರವನ್ನು ಕಳೆಯುವ ಜ್ಞಾನದ ಬೆಳಕಾಗುವಂತಹ ವ್ಯಕ್ತಿತ್ವ ಶಿಕ್ಷಕರದಾಗಲಿ ಎಂದು ಹಾರೈಸಿದರು.

Also read>> ಶಿಕ್ಷಕರಿಗೆ ‘Tr.’ ಗೌರವ: ಹೆಸರಿನ ಮುಂದೆ Teacher ಪದ ಬಳಕೆಗೆ ಡಿ.ಕೆ. ಶಿವಕುಮಾರ್ ಘೋಷಣೆ

ತತ್ವಶಾಸ್ತ್ರದಲ್ಲಿ ಪಾಂಡಿತ್ಯ ಹೊಂದಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಿ ರೂಪುಗೊಂಡಿದ್ದರು. ಮೈಸೂರಿನಿಂದ ಅವರು ನಿರ್ಗಮಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳೇ ಸಾರೋಟಿನ ನೊಗವನ್ನು ಎಳೆದು, ಅವರನ್ನು ಮೆರವಣಿಗೆಯಲ್ಲಿ ಬೀಳ್ಕೊಟ್ಟ ಸಂದರ್ಭ, ಅವರ ವ್ಯಕ್ತಿತ್ವ ವಿದ್ಯಾರ್ಥಿಗಳ ಮೇಲೆ ಬೀರಿದ್ದ ಪ್ರಭಾವಕ್ಕೆ ಸಾಕ್ಷಿಯಾಗಿದೆ. ರಾಷ್ಟ್ರಪತಿಯಾಗಿದ್ದ ಅವಧಿಯಲ್ಲಿಯೂ, ತಮ್ಮ ವೇತನದ ಬಹುಪಾಲು ಮೊತ್ತವನ್ನು ವಿದ್ಯಾರ್ಥಿಗಳ ಶೈಕ್ಷಣಿಕ ನೆರವಿಗಾಗಿ ಬಳಸಿದ ಅವರ ನಡೆ ಪ್ರೇರಣೀಯ ಎಂದು ಹೇಳಿದರು.PES Shivamogga

ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿ, ಗುರುವನ್ನು ದೇವರಂತೆ ಪೂಜಿಸುವ ಸಂಸ್ಕಾರ ಮತ್ತು ಪರಂಪರೆ ನಮ್ಮದು. ಜ್ಞಾನವನ್ನು ಬೋಧಿಸುವುದರ ಜೊತೆಗೆ ಮನುಷ್ಯನೊಳಗಿನ ಮನುಷ್ಯತ್ವವನ್ನು ಜಾಗೃತಗೊಳಿಸಿ, ಸಮಾಜವನ್ನು ಕಟ್ಟುವ ಮಹತ್ತರ ಕಾರ್ಯವನ್ನು ಶಿಕ್ಷಕರು ನಿರಂತರವಾಗಿ ಮಾಡುತ್ತಿದ್ದಾರೆ. ಎಐ ಮನುಷ್ಯನ ಬುದ್ಧಿಮತ್ತೆಯನ್ನು ಬದಲಿಸುವ ತಂತ್ರಜ್ಞಾನವಾಗಿ ನೋಡುವ ಬದಲು, ಮಾನವನ ಸಾಮರ್ಥ್ಯವನ್ನು ವಿಸ್ತರಿಸಿ, ಜ್ಞಾನ ಮತ್ತು ಸೃಜನಶೀಲತೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುವ ಸಹಾಯಕ ಶಕ್ತಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಂಶುಪಾಲರಾದ ಡಾ.ಎಸ್.ಎನ್.ಶ್ರೀಹರ್ಷ ಮಾತನಾಡಿ, ತಂತ್ರಜ್ಞಾನ ಮತ್ತು ಡಿಜಿಟಲ್ ಸಾಧನಗಳು ಅಪಾರ ಪ್ರಮಾಣದ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಒದಗಿಸುತ್ತಿದ್ದರೂ, ಶಿಕ್ಷಕರ ಸ್ಥಾನವನ್ನು ಅವು ಎಂದಿಗೂ ಸಂಪೂರ್ಣವಾಗಿ ಭರಿಸಲಾರವು ಎಂದರು.

ನಿವೃತ್ತ ಪ್ರಾಂಶುಪಾಲರಾದ ಡಾ.ಸಿ.ಎಸ್.ಶ್ರೀಧರ, ಡಾ.ಎ.ಸತೀಶ್ ಕುಮಾರ್ ಶೆಟ್ಟಿ, ಡಾ.ವಿಜಯಕುಮಾರ್, ಬಿಫಾರ್ಮ ವಿದ್ಯಾರ್ಥಿನಿ ಜ್ಯೋತಿ ಮಾತನಾಡಿದರು. ಇದೇ ವೇಳೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: National Pharmacy CollegeTeachers dayಶಿವಮೊಗ್ಗ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಕರಿಗೆ ‘Tr.’ ಗೌರವ: ಹೆಸರಿನ ಮುಂದೆ Teacher ಪದ ಬಳಕೆಗೆ ಡಿ.ಕೆ. ಶಿವಕುಮಾರ್ ಘೋಷಣೆ

Next Post

ವಿಶ್ವವೇ ತತ್ತರಿಸಿದರೂ ಭಾರತದ ಆರ್ಥಿಕತೆ ಅಬ್ಬರ: ಮೊದಲ ತ್ರೈಮಾಸಿಕದಲ್ಲಿ GDP 7.8% ಗ್ರೋತ್!

kalpa News

kalpa News

Next Post
Indian Economy 7.8 Percent Growth First Quarter Spl Article

ವಿಶ್ವವೇ ತತ್ತರಿಸಿದರೂ ಭಾರತದ ಆರ್ಥಿಕತೆ ಅಬ್ಬರ: ಮೊದಲ ತ್ರೈಮಾಸಿಕದಲ್ಲಿ GDP 7.8% ಗ್ರೋತ್!

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL