ಕಲ್ಪ ಮೀಡಿಯಾ ಹೌಸ್ | ಅಹಮದಾಬಾದ್ |
ಇಡಿಯ ಪ್ರಪಂಚದ ಕುತೂಹಲ ಕೆರಳಿಸಿರುವ ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 241 ರನ್’ಗಳ ಸವಾಲನ್ನು ಆಸ್ಟ್ರೇಲಿಯಾಗೆ ನೀಡಿದೆ.
ಅಹಮದಾಬಾದ್’ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಆರಂಭ ಮಾಡಿತು. ಆರಂಭಿತ ಹಂತದಲ್ಲಿ ಆಟ ಉತ್ತವಾಗಿದ್ದರೂ ನಂತರ ಬ್ಯಾಕ್ ಟು ಬ್ಯಾಕ್ ವಿಕೆಟ್ ಬಿದ್ದಿದ್ದರಿಂದ ಸಂಕಷ್ಟಕ್ಕೆ ಸಿಲುಕಿತ್ತು.
ಈ ವೇಳೆ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಆಸರೆಯಾದರು. ಈ ಇಬ್ಬರು ಆಟಗಾರರು ಅರ್ಧ ಶತಕ ಸಿಡಿಸಿ ಔಟಾದರು.
ಭಾರತ ಪರ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 4 ರನ್ ಗಳಿಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ವಿರಾಟ್ ಕೊಹ್ಲಿ 54 ರನ್ ಸಿಡಿಸಿ ಔಟಾದರೆ ಕೆಎಲ್ ರಾಹುಲ್ 66 ರನ್ ಗೆ ಔಟಾದರು. ಬಳಿಕ ಬಂದ ರವೀಂದ್ರ ಜಡೇಜಾ 9 ರನ್ ಬಾರಿಸಿ ಹೆಜಲ್ವುಡ್ ಎಸೆತದಲ್ಲಿ ಕೀಪರ್’ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಉತ್ತಮ ರನ್ ಕಲೆಹಾಕುವ ಭರವಸೆ ಮೂಡಿಸಿದ್ದ ಈ ಜೋಡಿ ಆಟಕ್ಕೆ ಆಸ್ಟ್ರೇಲಿಯಾ ಕ್ಯಾಪ್ಟನ್ ಪ್ಯಾಟ್ ಕಮ್ಮಿನ್ಸ್ ಕೊಹ್ಲಿ ಆಟಕ್ಕೆ ಬ್ರೇಕ್ ಹಾಕಿದರು.
54 ರನ್ (63 ಎಸೆತ, 4 ಬೌಂಡರಿ) ಗಳಿಸಿ ಕೊಹ್ಲಿ ಔಟಾಗುತ್ತಿದ್ದಂತೆ, ಇಡೀ ಸ್ಟೇಡಿಯಂನಲ್ಲಿ ನೀರವ ಮೌನ ಆವರಿಸಿತ್ತು. ಲಕ್ಷಾಂತರ ಅಭಿಮಾನಿಗಳು ತಲೆಯ ಮೇಲೆ ಕೈಹೊತ್ತು ಕುಳಿತರು. ಆ ನಂತರ 107 ಎಸೆತಗಳನ್ನು ಎದುರಿಸಿದ ಕೆ.ಎಲ್. ರಾಹುಲ್ ಕೇವಲ ಒಂದೇ ಒಂದು ಬೌಂಡರಿ ಸಿಡಿಸಿ 66 ರನ್ ಗಳಿಸಿದರು.
ನಂತರ ಕಣಕ್ಕಿಳಿದ ಯಾವೊಬ್ಬ ಆಟಗಾರರೂ ಹೆಚ್ಚು ಹೊತ್ತು ಕ್ರೀಸ್ ಉಳಿಯದ ಕಾರಣ ಟೀಂ ಇಂಡಿಯಾ ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಟೀಂ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ 15 ರನ್, ರವೀಂದ್ರ ಜಡೇಜಾ 9 ರನ್, ಮೊಹಮ್ಮದ್ ಶಮಿ 6 ರನ್, ಜಸ್ಪ್ರೀತ್ ಬುಮ್ರಾ 1 ರನ್, ಕುಲ್ದೀಪ್ ಯಾದವ್ 10 ರನ್ ಹಾಗೂ ಮೊಹಮ್ಮದ್ ಸಿರಾಜ್ 9 ರನ್ ಗಳಿಸಿ ಔಟಾದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post