ರಾಯಘರ್(ಮಹಾರಾಷ್ಟ್ರ): ನಿನ್ನ ಮೈ ಬಣ್ಣ ಕಪ್ಪು ಎಂದು ಅವಮಾನ ಮಾಡಿದ ಕಾರಣಕ್ಕಾಗಿ ಮಹಿಳೆಯೊಬ್ಬಳು ತನ್ನ ಸಂಬಂಧಿಗಳಿಗೆ ವಿಷ ಹಾಕಿ ಸಾಯಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ರಾಯಘರದಲ್ಲಿ ಈ ಘಟನೆ ನಡೆದಿದ್ದು, ಸಂಬಂಧಿಕರ ಕಾರ್ಯಕ್ರಮವೊಂದರಲ್ಲಿ ತಯಾರಿಸಿದ್ದ ಆಹಾರದಲ್ಲಿ ಮಹಿಳೆ ವಿಷ ಹಾಕಿದ್ದು, ಐವರ ಮೃತರಾಗಿದ್ದಾರೆ.
ಆಕೆ ವಿಷ ಹಾಕಿದ್ದ ಆಹಾರ ಸೇವಿಸಿದ ಮೂವರು ಮಕ್ಕಳು ಹಾಗೂ ಓರ್ವ ಪುರುಷ ಸಾವನ್ನಪ್ಪಿದ್ದು, ಸುಮಾರು 80ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಇಂದಿಗೂ ಚಿಕಿತ್ಸೆ ಪಡೆಯುತ್ತಿದ್ದಾರೆ
ಜೂನ್ 18ರಂದು ಈ ಘಟನೆ ನಡೆದಿದ್ದು ಈಗ ಬೆಳಕಿಗೆ ಬಂದಿದೆ. ಪ್ರಜ್ಯಾ ಸರ್ವೇಸ್ ಎಂಬ ಮಹಿಳೆ ಈ ಕೃತ್ಯ ಎಸಗಿದ್ದು, ಈಕೆಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.
Discussion about this post