ಕಲ್ಪ ಮೀಡಿಯಾ ಹೌಸ್ | ಉಡುಪಿ |
ತಿರುಪತಿ ತಿರುಮಲದಲ್ಲಿ ನಡೆದ ಲಡ್ಡೂ ಪ್ರಸಾದ ಘಟನೆ ಅತ್ಯಂತ ಖಂಡನೀಯವಾದುದು ಎಂದು ಉಡುಪಿ #Udupi ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಖಂಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ತಿರುಮಲ ಕ್ಷೇತ್ರದಲ್ಲಿ ಲಡ್ಡೂ #Laddu ಪ್ರಸಾದದಲ್ಲಿ ನಡೆದಿರುವ ಕಲಬೆರಕೆಯ ಘಟನೆ ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧವಾಗಿದೆ ಎಂದರು.

ದೇವಸ್ಥಾನ ಮತ್ತು ಮಠ ಮಂದಿರಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಆಕ್ರಮಣಗಳನ್ನು ಶಾಶ್ವತವಾಗಿ ತಡೆಯಬೇಕಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.
ಸನಾತನ ಧರ್ಮದ ಸಂರಕ್ಷಣೆಗಾಗಿ ರಾಷ್ಟ್ರ ಮಟ್ಟದಲ್ಲಿ ಸಂತರ ಪೀಠಾಧಿಪತಿಗಳ ನೇತೃತ್ವದ ಮಾರ್ಗದರ್ಶಕ ಮಂಡಳಿಯನ್ನು ರಚಿಸಬೇಕು.
ಯಾವುದೇ ಕಾರಣಕ್ಕೂ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಶ್ರೀಪಾದರು ತಿಳಿಸಿದರು.

ತಿರುಪತಿಯಲ್ಲಿ ಶ್ರೀನಿವಾಸನ ಸನ್ನಿಧಿಯಲ್ಲಿ ನಡೆದಿರುವ ಅಪಚಾರವನ್ನು ಶ್ರೀ ಭಂಡಾರಕೇರಿ ಮಠಾಧೀಶರಾದ ಶ್ರೀವಿದ್ಯೇಶತೀರ್ಥ ಶ್ರೀಪಾದಂಗಳವರು ಖಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಇದೊಂದು ಸಹಿಸಲು ಸಾಧ್ಯವಾಗದ ಅಪಚಾರವಾಗಿದೆ. ಇಂತಹ ಕೃತ್ಯಗಳು ನಿಲ್ಲಬೇಕು. ಇದನ್ನು ಖಂಡಿಸಿ ಧರ್ಮ ಸಂಸತ್ ಅನ್ನು ರಚಿಸಿ ಆ ಮೂಲಕ ರಾಜಕೀಯ ಪಕ್ಷಗಳ ಹಸ್ತಕ್ಷೇಪದಿಂದ ಮುಕ್ತಗೊಳಿಸಬೇಕು ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







Discussion about this post