ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ದೊಡ್ಡೇರಿ ಬಳಿಯಲ್ಲಿ ನಿನ್ನೆ ರಾತ್ರಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೊಡ್ಡೇರಿ ಬಳಿಯಲ್ಲಿ ನಿನ್ನೆ ರಾತ್ರಿ ಘಟನೆ ಸಂಭವಿಸಿದೆ. ಭದ್ರಾವತಿಯಿಂದ ಶಿವನೇ ಗ್ರಾಮಕ್ಕೆ ಹೋಗುತ್ತಿದ್ದ ಮಹೇಂದ್ರ ಟ್ರ್ಯಾಕ್ಟರ್ ಹಾಗೂ ದೊಡ್ಡೇರಿ ಗ್ರಾಮದಿಂದ ಗಾರೆ ಕೆಲಸ ಮಾಡಿಕೊಂಡು ಸ್ಪ್ಲೆಂಡರ್ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳನ್ನು ಭದ್ರಾವತಿ ಹೊಸಮನೆ ನಿವಾಸಿಗಳಾದ ಶಿವು (28) ಹಾಗೂ ರಾಘವೇಂದ್ರ (30) ಎಂದು ಗುರುತಿಸಲಾಗಿದೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















