ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕಾಶ್ಮೀರಿ ಪ್ರತ್ಯೇಕತಾವಾದಿ ಹೋರಾಟಗಾರ, ಕಾಶ್ಮೀರಿ ಉಗ್ರ ಯಾಸಿನ್ ಮಲ್ಲಿಕ್’ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಈ ಕುರಿತಂತೆ ಎನ್’ಐಎ ವಿಶೇಷ ನ್ಯಾಯಾಲಯ ಇಂದು ಸಂಜೆ ಮಹತ್ವದ ತೀರ್ಪು ಪ್ರಕಟಿಸಿದ್ದು, ಭಯೋತ್ಪಾದನೆಗೆ ಆರ್ಥಿಕ ನೆರವು, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಸೇರಿದಂತೆ ಎಲ್ಲಾ ಆರೋಪಗಳಲ್ಲಿ ತಪ್ಪೊಪ್ಪಿಕೊಂಡ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.
ಇದರೊಂದಿಗೆ ಯಾಸಿನ್’ಗೆ 10 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಯಾಸಿನ್ ಮಲ್ಲಿಕ್’ನಲ್ಲಿ ಇಂದು ಸಂಜೆ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಎನ್’ಐಎ ನ್ಯಾಯಾಲಯದ ಸುತ್ತಲೂ ಹಾಗೂ ನ್ಯಾಯಾಧೀಶರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.
ಶ್ರೀನಗರದಲ್ಲಿ ಭಾರೀ ಹಿಂಸಾಚಾರ, ಗಾಳಿಯಲ್ಲಿ ಗುಂಡು
ಇನ್ನು, ಯಾಸಿನ್ ಮಲ್ಲಿಕ್’ಗೆ ಶಿಕ್ಷೆ ಪ್ರಮಾಣವನ್ನು ಪ್ರಕಟಿಸುವ ಮುನ್ನವೇ ಶ್ರೀನಗರದಲ್ಲಿ ಈತನ ಬೆಂಬಲಿಗರು ಹಿಂಸಾಚಾರಕ್ಕೆ ಇಳಿದಿದ್ದರು. ನಗರದಲ್ಲಿ ಭಾರೀ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿದ ಪುಂಡರು, ಪೊಲೀಸರು ಹಾಗೂ ಭದ್ರತಾ ಪಡೆಗಳೊಂದಿಗೆ ವಾಗ್ವಾದವೂ ಸಹ ನಡೆಸಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದ್ದಾರೆ. ಇದೇ ವೇಳೆ ಶ್ರೀನಗರದಲ್ಲಿ ಇಂಟರ್’ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















