ಉರಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಉರಿ ಸೆಕ್ಟರ್’ನಲ್ಲಿರುವ ಸೇನಾ ಕ್ಯಾಂಪ್ ಮೇಲೆ ಇಂದು ಮುಂಜಾನೆ ಉಗ್ರರು ದಾಳಿ ನಡೆಸಿದ್ದು, ಭಾರೀ ಗುಂಡಿನ ಕಾಳಗ ನಡೆಯುತ್ತಿದೆ.
ಇಲ್ಲಿರುವ ಸೇನಾ ರೆಜಿಮೆಂಟ್ ಮೇಲೆ ಉಗ್ರರು ಭಾರೀ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸೇನಾ ಕ್ಯಾಂಪ್’ಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದಾಕ್ಷಣ ಎಚ್ಚೆತ್ತ ಯೋಧರು ಭಾರೀ ಪ್ರತಿದಾಳಿ ನಡೆಸಿದ್ದು, ತೀವ್ರ ಗುಂಡಿನ ಕಾಳಗ ನಡೆಯುತ್ತಿದೆ.
ಇಡಿಯ ಪ್ರದೇಶವನ್ನು ಸೇನೆ ಹಾಗೂ ಸ್ಥಳೀಯ ಪೊಲೀಸರು ಸುತ್ತುವರೆದಿದ್ದು, ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ…
Discussion about this post