ಕಲ್ಪ ಮೀಡಿಯಾ ಹೌಸ್ | ತಮಿಳುನಾಡು |
ಮಿಚಾಂಗ್ Michong ಚಂಡಮಾರುತ ದಕ್ಷಿಣ ಭಾರತದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಪರಿಣಾಮ ಮೂರು ರಾಜ್ಯಗಳಲ್ಲಿ ಇಂದು ಹಾಗೂ ನಾಳೆ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಪುದುಚೇರಿ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣಗಳಲ್ಲಿ ಈಗಾಗಲೇ ಮಳೆ ಸುರಿಯುತ್ತಿದೆ. ಇದರ ಬೆನ್ನಲ್ಲೇ ಪುದುಚೇರಿ ಹಾಗೂ ತಮಿಳುನಾಡಿನಲ್ಲಿ ಇಂದು ಹಾಗೂ ಡಿ.6ರ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶದ ಬಾಪಟ್ಲಾ ಸಮೀಪ ನೆಲ್ಲೂರು ಮತ್ತು ಮಚಿಲಿಪಟ್ಟಣಂ ನಡುವೆ ತೀವ್ರ ಚಂಡಮಾರುತದಿಂದ ಭೂಕುಸಿತವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Also read: ಭ್ರಷ್ಟರ ಬೇಟೆ | ರಾಜ್ಯದ 63 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ಬಂಗಾಳಕೊಲ್ಲಿಯಲ್ಲಿ ಅಲ್ಪಾವಧಿಯ ವಾಯುಭಾರ ಕುಸಿತದಿಂದ ಚೆನ್ನೈನಲ್ಲಿ ನಿರಂತರ ಮಳೆಯಾಗುತ್ತಿದ್ದು ಚೆನ್ನೈ ಮತ್ತು ಸುತ್ತಮುತ್ತಲಿನ ಹಲವಾರು ಪ್ರದೇಶಗಳು ಜಲಾವೃತವಾಗಿವೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ನಗರದ ಮಧುರವಾಯಲ್, ಪೋರೂರ್, ಸಾಲಿಗರಾಮಮ್ ಮತ್ತು ವಲಸರವಕ್ಕಂ ಸೇರಿದಂತೆ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಜೋರಾದ ಗಾಳಿಗೆ ವಿವಿಧೆಡೆ ಮರಗಳು ಧರೆಗುರುಳಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post