ಕಲ್ಪ ಮೀಡಿಯಾ ಹೌಸ್ | ತರೀಕೆರೆ |
ರಸ್ತೆ ಬದಿಯಲ್ಲಿ ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ಸಮಯ ಪ್ರಜ್ಞೆ ಮೆರೆದ ವೈದ್ಯರೊಬ್ಬರು ಹೆರಿಗೆ ಮಾಡಿಸಿದ ಮಾನವೀಯ ಘಟನೆ ನಗರದಲ್ಲಿ ನಡೆದಿದೆ.
ಅಜ್ಜಂಪುರದ ಗಡಿರಂಗಾಪುರ ಮೂಲದ ಯಶೋಧಾ ಎಂಬ ಮಹಿಳೆಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪಿನ ಈ ಮಹಿಳೆ ಇನ್ನೊಬ್ಬ ಮಹಿಳೆಯೊಂದಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೊರಟಿದ್ದು, ಬಸ್’ಗಾಗಿ ತರೀಕೆರೆಯಲ್ಲಿ ಕಾಯುತ್ತಿದ್ದರು. ಈ ವೇಳೆ ಆಕೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸ್ಥಳೀಯರ ನೆರವಿನೊಂದಿಗೆ ಸರ್ಕಾರಿ ಆಸ್ಪತ್ರೆಗೆ ತೆರಳುತ್ತಿದ್ದರು.
ಆದರೆ, ಆಸ್ಪತ್ರೆಯ ಸನಿಹದಲ್ಲಿಯೇ ಆಕೆಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ತಾಲೂಕು ವೈದ್ಯಾಧಿಕಾರಿ ಹಾಗೂ ಮೂಳೆ ತಜ್ಞ ದೇವರಾಜ್ ಆಕೆಯನ್ನು ಆಸ್ಪತ್ರೆಗೆ ಸೇರಿಸಿ ಪ್ರಸೂತಿ ವೈದ್ಯ ನಟರಾಜ್ ಅವರನ್ನು ಕರೆಯಿಸಿ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ ಹಾಗೂ ಹೆಣ್ಣು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
Also read: ಇಂತಹ ಕೆಟ್ಟ ತಾಯಿಯನ್ನು ನೀವು ನೋಡಿರಲು ಸಾಧ್ಯವೇ ಇಲ್ಲ! ಅಷ್ಟಕ್ಕೂ ಈಕೆ ಎಳೆ ಕೂಸಿಗೆ ಮಾಡಿದ್ದೇನು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post