ಕಲ್ಪ ಮೀಡಿಯಾ ಹೌಸ್ | ತರೀಕೆರೆ |
ಬೈಕಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯ ಸೀರೆ ಚಕ್ರಕ್ಕೆ ಸಿಲುಕಿದ ಪರಿಣಾಮ ಆಕೆಯ ಕಾಲೂ ಸಹ ಚಕ್ರಕ್ಕೆ ಸಿಲುಕಿ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ.
ಇಟ್ಟಿಗೆ ಗ್ರಾಮದ ಯಶೋಧಾ ಬಾಯಿ ಎಂಬ ಮಹಿಳೆ ಬೈಕಿನಲ್ಲಿ ಹಿಂದೆ ಕುಳಿತು ಬರುವಾಗ ಅವರ ಸೀರೆಯ ಸೆರುಗು ಹಾಗೂ ನೆರಿಗೆ ಚಕ್ರಕ್ಕೆ ಸಿಲುಕಿದೆ. ಇದರ ಪರಿಣಾಮ ಅವರ ಕಾಲೂ ಸಹ ಚಕ್ರಕ್ಕೆ ಸಿಲುಕಿದೆ. ಇದರಿಂದಾಗಿ ಬೈಕ್ ಸಹಿತ ಸವಾರ ಹಾಗೂ ಮಹಿಳೆ ಕೆಳಕ್ಕೆ ಬಿದ್ದಿದ್ದಾರೆ.
ಮಹಿಳೆಯ ಕಾಲು ಗೇರ್ ಬಾಕ್ಸ್ ಮೂಲಕ ಚಕ್ರದ ಒಳಗೆ ಸಿಲುಕಿಕೊಂಡಿದ್ದು, ಬೈಕ್ ಸವಾರ ಹಾಗೂ ಸ್ಥಳೀಯರು ಎಷ್ಟೇ ಪ್ರಯತ್ನಿಸಿದರೂ ಕಾಲನ್ನು ಹೊರಕ್ಕೆ ತೆಗೆಯಲು ಸಾಧ್ಯವಾಗಿಲ್ಲ. ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನೋವಿನಿಂದ ನರಳಾಡಿದ್ದಾರೆ. ಕೊನೆಗೆ ಬೈಕಿನ ಚೈನ್ ಕಟ್ ಮಾಡಿ, ಗೇರ್ ಬಾಕ್ಸ್ ಬಿಚ್ಚಿ ಮಹಿಳೆಯ ಕಾಲನ್ನು ಹೊರ ತೆಗೆದಿದ್ದಾರೆ. ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.
Also read: ಶಿವಮೊಗ್ಗದಲ್ಲಿ ಎರಡು ಕಡೆ ಕಳ್ಳತನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳುವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post