ಕಲ್ಪ ಮೀಡಿಯಾ ಹೌಸ್ | ತರೀಕೆರೆ |
ಚಲಿಸುತ್ತಿದ್ದ ಕೆಎಸ್’ಆರ್’ಟಿಸಿಯ ಐರಾವತ ಬಸ್’ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಅನಾಹುತದಿಂದ ಪಾರಾಗಿದ್ದಾರೆ.
ತರೀಕೆರೆ ತಾಲೂಕು ಅಜ್ಜಂಪುರ ಕ್ರಾಸ್ ಬಳಿ ರಾತ್ರಿ 1.30ರ ಹೊತ್ತಿಗೆ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಸೆಮಿ ಸ್ಲೀಪರ್ ಬಸ್’ನನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ.
ಬಸ್’ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಬಸ್ ಚಾಲಕ ವಾಹನವನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ತತಕ್ಷಣವೇ ಎಲ್ಲ ಪ್ರಯಾಣಿಕರನ್ನು ಕೆಳಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
Also read: ಪ್ರಧಾನಿ ಮೋದಿ ಬಳಿ ಎಷ್ಟು ಆಸ್ತಿ, ನಗದು ಇದೆ? ಸ್ವಂತ ಕಾರು ಇದೆಯೇ? ಇಲ್ಲಿದೆ ಡಿಟೇಲ್ಸ್
ಬೆಂಕಿ ನಂದಿಸುವ ಪ್ರಯತ್ನವನ್ನು ಮಾಡಿದ್ದಾರೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ವೇಳೆಗಾಗಲೇ ಬಸ್ ಭಾಗಶಃ ಸುಟ್ಟು ಹೋಗಿತ್ತು.
ಐರಾವತ ಬಸ್ಸು ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು. ಚಾಲಕ, ನಿರ್ವಾಹಕ ಸೇರಿ ಒಟ್ಟು 40 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.
ತರೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























