ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿರುವ ಕೆ.ಎಸ್. ಈಶ್ವರಪ್ಪ ಅವರ ನಿರ್ಧಾರದ ಹಿಂದೆ ಪ್ರಧಾನಿಯವರ ಆ ಒಂದು ಮಾತು ಕಾರಣ ಎಂದು ಹೇಳಲಾಗಿದೆ.
Also Read: ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ
ಸಂತೋಷ್ ಸಾವಿಗೆ ಈಶ್ವರಪ್ಪ ಅವರ ಕಿರುಕುಳವೇ ಕಾರಣ ಎಂಬ ಆರೋಪದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆಯ ಒತ್ತಡ ತೀವ್ರವಾಗಿತ್ತು. ಪ್ರತಿಪಕ್ಷಗಳಿಂದ ತೀವ್ರ ಒತ್ತಡ ಹಾಗೂ ಪ್ರತಿಭಟನೆ ನಡೆದಿತ್ತು. ಆದರೆ, ತಾವು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಹೀಗಾಗಿ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ನಿನ್ನೆ ಹೇಳಿದ್ದರು.

Also Read: ಏ.16ರಂದು ಗಾಯಕಿ ಸೂರ್ಯ ಗಾಯತ್ರಿ ಅವರಿಂದ ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮ
ಹೌದು… ಆರೋಪವಿದ್ದರೂ ತಮ್ಮ ತಪ್ಪಿಲ್ಲ, ತಾವೂ ರಾಜೀನಾಮೆ ನೀಡುವುದಿಲ್ಲ ಎಂದು ಈಶ್ವರಪ್ಪ ಅವರು ತೆಗೆದುಕೊಂಡಿದ್ದ ನಿರ್ಧಾರದ ಹಿಂದೆ ಕೇಂದ್ರದ ನಾಯಕರೊಬ್ಬರ ಬೆಂಬಲವಿತ್ತು ಎನ್ನಲಾಗಿದೆ.
ಆದರೆ, ಈ ವಿಚಾರದಲ್ಲಿ ಮಧ್ಯಪ್ರವೇಶಿಸಿದ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲರಿಗೂ ಒಂದೇ ನಿಯಮ ಎಂದು ತಾಕೀತು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಈಶ್ವರಪ್ಪ ರಾಜೀನಾಮೆಯ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post