ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಹಿನ್ನೆಲೆಯಲ್ಲಿ ರಾಷ್ಟ್ರದ ಹಲವೆಡೆ ಈಗಾಗಲೇ ಭುಗಿಲೆದ್ದ ಪರಿಣಾಮ ಮೂವರು ಬಲಿಯಾಗಿದ್ದು, ಹೋರಾಟದ ಕಿಚ್ಚು ತೀವ್ರಗೊಂಡಿದ್ದರೂ, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, ದೇಶದಾದ್ಯಂತ ಎಷ್ಟೇ ವಿರೋಧ ವ್ಯಕ್ತವಾದರೂ ಸರಿ, ತಮ್ಮ ನಿರ್ಧಾರಿಂದ ಹಿಂದೆ ಸರಿಯದೇ ಇರಲು ನಿರ್ಧರಿಸಿದ್ದು, ಕಾಯ್ದೆಯನ್ನು ಜಾರಿಗೆ ತಂದೆ ತೀರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಇದೇ ವಿಚಾರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರೂ ಸಹ ತಮ್ಮ ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು ಹಿಂಸಾಚಾರವನ್ನು ಹತ್ತಿಕ್ಕುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಎಲ್ಲಾ ಪ್ರಮುಖ ನಗರಗಳು ಮತ್ತು ಹಲವಾರು ಸಣ್ಣ ಪಟ್ಟಣಗಳಲ್ಲಿ ಬೃಹತ್ ಪ್ರತಿಭಟನೆಗಳು ಭುಗಿಲೆದ್ದ ನಂತರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಗುರುವಾರ ಪ್ರತಿಭಟನೆಗಳು ನಡೆದವು. ಕರ್ನಾಟಕ ಮತ್ತು ಉತ್ತರಪ್ರದೇಶದಲ್ಲಿ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಮೂವರು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ.
ಬೆಳಿಗ್ಗೆ ಪ್ರಾರಂಭವಾದ ಪ್ರತಿಭಟನೆಗಳು ರಾತ್ರಿಯವರೆಗೂ ಮುಂದುವರೆದಂತೆ, ಗೃಹ ಸಚಿವ ಅಮಿತ್ ಶಾ ಅವರು ಸರ್ಕಾರಿ ಉನ್ನತ ಅಧಿಕಾರಿಗಳ ಸಭೆಯನ್ನು ಕರೆದು ದೇಶದ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಿದ್ದಾರೆ.
Get in Touch With Us info@kalpa.news Whatsapp: 9481252093







Discussion about this post