ಶಿವಮೊಗ್ಗ: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಗಲು ರಾತ್ರಿ ಎನ್ನದೇ ದುಡಿಯುತ್ತಿದ್ದು, ಜಾಗೃತಿಗಾಗಿ ಹಲವು ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.
ನಗರದ ಮೆಡಿಕಲ್ ಶಾಪ್, ಅಂಗಡಿ ಮುಂಗಟ್ಟುಗಳ ಮುಂದೆ ಜನರು ನಿಲ್ಲುವ ಸ್ಥಳದಲ್ಲಿ ಅಂತರ ಗೆರೆಯನ್ನು ಹಾಕಿ, ನಿಗದಿತ ಸ್ಥಳದಲ್ಲೇ ನಿಂತು ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟಲು ಸಹಕಾರ ನೀಡುವಂತೆ ಕೋರಲಾಯಿತು.
ಇದರೊಂದಿಗೆ ಸೋಂಕು ಹರಡದಂತೆ ಗೋಪಿ ವೃತ್ತದಿಂದ ರೈಲ್ವೆ ನಿಲ್ದಾಣದವರೆಗೂ ಕ್ರಿಮಿನಾಶಕ ಸಿಂಪಡನೆ ಮಾಡಲಾಯಿತು. ಪಾಲಿಕೆ ಸಿಬ್ಬಂದಿಗಳು, ಅಗ್ನಿ ಶಾಮಕ ಹಾಗೂ ತುರ್ತು ನಿರ್ವಹಣಾ ದಳದವರು ಪಾಲ್ಗೊಂಡಿದ್ದರು.
Discussion about this post