ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜ.2 ಹಾಗೂ 3ರಂದು ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿದ್ದು, ಇದು ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ನೀಡಲಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಪಿಇಎಸ್ ಕಾಲೇಜಿನಲ್ಲಿ ಎರಡು ದಿನ ಕಾರ್ಯಕಾರಿಣಿ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದು ಎರಡೂ ದಿನವೂ ಅವರು ಭಾಗಿಯಾಗಲಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಷಿ ಪಾಲ್ಗೊಳ್ಳಲಿದ್ದಾರೆ ಎಂದರು.









Discussion about this post