ನವದೆಹಲಿ: ಭಾರೀ ಕುತೂಹಲ ಕೆರಳಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಯುವ ಮುಖಂಡ ತೇಜಸ್ವಿ ಸೂರ್ಯ ಅವರಿಗೆ ಟಿಕೇಟ್ ಘೋಷಣೆ ಮಾಡಿರುವ ಬಿಜೆಪಿ, ಗ್ರಾಮಾಂತರದಿಂದ ಅಶ್ವತ್ಥ ನಾರಾಯಣ ಅವರನ್ನು ಕಣಕ್ಕಿಳಿಸಿದೆ.
ಕೆಲವು ತಿಂಗಳ ಹಿಂದೆ ನಿಧನರಾದ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅವರು ಒಳ್ಳೆಯ ಹೆಸರು ಹೊಂದಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಇದರ ಜೊತೆಯಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಎರಡನೆಯ ಕ್ಷೇತ್ರವಾಗಿ ಇಲ್ಲಿಂದಲೇ ಸ್ಪರ್ಧಿಸಲಿದ್ದಾರೆ ಎಂಬ ವದಂತಿಯೂ ಸಹ ಹಬ್ಬಿತ್ತು. ಆದರೆ, ಇವೆಲ್ಲವುಗಳಿಗೂ ತೆರೆ ಬಿದ್ದಿದ್ದು, ತೇಜಸ್ವಿ ಸೂರ್ಯ ಹೆಸರನ್ನು ಪಕ್ಷ ಘೋಷಣೆ ಮಾಡಿದೆ.
Discussion about this post