ಕಲ್ಪ ಮೀಡಿಯಾ ಹೌಸ್ | ಬಿಹಾರ |
ಇಲ್ಲಿನ ಬೇಗುಸರಾಯ್’ನಲ್ಲಿ ಗಂಡಕ್ ನದಿಯ ಮೇಲೆ ನಿರ್ಮಿಸಲಾಗಿದ್ದ 13 ಕೋಟಿ ರೂ. ವೆಚ್ಚದ ಸೇತುವೆ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಈ ನದಿಯ ಮೇಲೆ ಸುಮಾರು 13 ಕೋಟಿ ರೂ. ವೆಚ್ಚದಲ್ಲಿ 206 ಮೀಟರ್ ಉದ್ದದ ಸೇತುವೆ ನಿರ್ಮಾಣ ಮಾಡಲಾಗಿತ್ತು.2016ರಲ್ಲಿ ಮುಖ್ಯಮಂತ್ರಿ ನರ್ಬಾಡ್ ಯೋಜನೆಯಡಿಯಲ್ಲಿ ಈ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಆ ಬಳಿಕ 2017ರಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಉದ್ಘಾಟನೆಗೊಂಡಿರಲಿಲ್ಲ. ಆ ಬಳಿಕ ಕೆಲದಿನಗಳ ಹಿಂದೆ ಸೇತುವೆಯ ಮೇಲ್ಭಾಗದಲ್ಲಿ ಬಿರುಕು ಕಾಣಿಸಿಕೊಂಡಿತ್ತು.
ಆದರೆ, ಇದು ಡಿ.15ರಂದೇ ಈ ಸೇತುವೆಯ ಮುಂಭಾಗದಲ್ಲಿ ಬಿರುಕು ಬಿಟ್ಟಿದ್ದ ಕುರಿತಾಗಿ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿಯನ್ನೂ ಸಹ ನೀಡಲಾಗಿತ್ತು. ಮಾಹಿತಿ ನೀಡಿ, ಅದನ್ನು ದುರಸ್ತಿಗೊಳಿಸುವ ಮುನ್ನವೇ ಇಂದು ಕುಸಿದು ಬಿದ್ದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post