ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಡಿ.ಕೆ. ಶಿವಕುಮಾರ್ #DKShivakumar ವಿರುದ್ಧದ ಸಿಬಿಐ #CBI ತನಿಖೆ ಹಿಂಪಡೆದ ಸರಕಾರದ ಕ್ರಮವನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ #RAshok ವಿಧಾನಸಭೆಯಲ್ಲಿ ಶುಕ್ರವಾರ ತರಾಟೆಗೆ ತೆಗೆದುಕೊಂಡರು.
ಸರಕಾರದ ಕ್ರಮವನ್ನು ವಿರೋಧಿಸಿ ನಿಲುವಳಿ ಸೂಚನೆ ಮಂಡನೆಗೆ ಪ್ರಯತ್ನಿಸಿದರು. ಪ್ರಕರಣದ ವಿಚಾರಣೆ ಕೋಟ್೯ನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಅವಕಾಶ ನಿರಾಕರಿಸಿದರು.

ಬಿ.ಎಸ್. ಯಡಿಯೂರಪ್ಪ #BSYediyurappa ನೇತೃತ್ವದ ಬಿಜೆಪಿ ಸರಕಾರವು ಡಿಕೆ ಶಿವಕುಮಾರ್ ಅವರು ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಗಳ ಮೇರೆಗೆ 2019 ರ ಸೆಪ್ಟೆಂಬರ್25 ರಂದು ಸಿಬಿಐ #CBIProbe ತನಿಖೆಗೆ ಒಪ್ಪಿಸಿತ್ತು. ಒಮ್ಮೆ ತನಿಖೆಗೆ ನೀಡಿದ್ದ ಪ್ರಕರಣವನ್ನು ಹಿಂದೆ ಪಡೆಯಲು ಬರುವುದಿಲ್ಲ ಎಂದು ಪ್ರತಿಪಾದಿಸಿದರು.

ಇದಕ್ಕೆ ಬಿಜೆಪಿಯ ಎಲ್ಲಾ ಶಾಸಕರು ದನಿಗೂಡಿಸಿ ಈ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು. ಆದರೆ ಇದಕ್ಕೆ ಒಪ್ಪಂದ ಸ್ಪೀಕರ್ ಖಾದರ್ ಅವರು ಪ್ರಕರಣದ ವಿಚಾರಣೆ ನ್ಯಾಯಾಲಯದ ಮುಂದೆ ಇದೆ ಎಂದು ಅವಕಾಶ ನಿರಾಕರಿಸಿದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post