No Result
View All Result
From Complex Revisions to Robotic Spine Care: Narayana Health City Marks 10,000 Surgery Milestone
English Articles

From Complex Revisions to Robotic Spine Care: Narayana Health City Marks 10,000 Surgery Milestone

by ಕಲ್ಪ ನ್ಯೂಸ್
February 24, 2026
0

Kalpa Media House  |  Kalaburagi  | Narayana Health City announced successfully completion of 10,000 orthopaedic surgeries over the past three...

Read moreDetails
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣ | ಸಿಎಂ ಸಿದ್ದರಾಮಯ್ಯ ವಿವರಿಸಿದ್ದು ಹೀಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 13, 2025
in ರಾಷ್ಟ್ರೀಯ
0
ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |  ವರದಿ: ಡಿ.ಎಲ್. ಹರೀಶ್  |

ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.

ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ ಎಂದು ಕಿಡಿ ಕಾರಿದರು.ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ನ ಕಚ್ಚಾ ತೈಲದ ಬೆಲೆಯ ಮೇಲೆ ದರ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲಕ್ಕೆ 120 ಡಾಲರ್ ಇದ್ದು, ಈಗ 65 ಡಾಲರ್ ಗೆ ಇಳಿದಿದೆ ಎಂದರು.

ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇದ್ದು, 800 ರೂ. ಕ್ಕೂ ಮೀರಿದೆ. ಆದರೂ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ. ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ, ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದು, ಆರ್ಥಿಕ ದಿವಾಳಿಯಾಗಿದ್ದರೆ, ಅದಕ್ಕೆ ಬಿಜೆಪಿಯವರೇ ಕಾರಣ ಎಂದರು.

ಬಜೆಟ್ ನ ಗಾತ್ರ 38 ಸಾವಿರ ಕೋಟಿ ಹೆಚ್ಚಳ- ಇದು ಆರ್ಥಿಕ ದಿವಾಳಿತನವೇ?
ಗ್ಯಾರಂಟಿಗಳಿಂದಲೇ ಆರ್ಥಿಕತೆ ಹಾಳಾಗಿದೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿರುವ ಬಗ್ಗೆ ಉತ್ತರ ನೀಡುತ್ತಾ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಾವು ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಿಸಲಾಗಿದೆ. ಇದು ನಮ್ಮ ಸರ್ಕಾರದ ಆರ್ಥಿಕ ದಿವಾಳಿತನವೇ ಎಂದು ಪ್ರಶ್ನಿಸಿದರು.ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ಮೋದಿಯವರೇ ಕಾರಣ
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 5311000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೆ ಸಾಲ ಹೆಚ್ಚಿದೆ. ದೇಶದ ಸಾಲ ಮೊತ್ತ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಎಂದರು.

ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ
ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿರುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರು ಮುಖ್ಯಮಂತ್ರಿಯಾಗಿ, ವಿರೋಧಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರೋಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ ಎಂದರು.

http://kalpa.news/wp-content/uploads/2025/03/PES-Video.mp4

ಒಂದು ಕುಟುಂಬದಲ್ಲಿ ಆರ್ಥಿಕವಾಗಿ, ಸಾಮಾಜಿಕವಾದ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆಯದೇ, ಅನೇಕ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ್ದು ಅಗತ್ಯ ಎಂದರು.

ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ
ಬಿಜೆಪಿಯವರು ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮೀಕ್ಷೆಯನ್ನು ಶೇ. 95 ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದರು.ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ

ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದರು.

ಒಳಮೀಸಲಾತಿ ಜಾರಿಗೆ ತರಲು ನಾಗಮೋಹನ್ದಾಸ್ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: CM SiddharamaiahGovt of IndiaGovt of KarnatakaKannada News WebiteKarnataka politicsLatest News KannadaPolitical NewsPrice HikeSiddharamaiah
Share196Tweet123Send
Previous Post

ಸಂವಿಧಾನ ಶಿಲ್ಪಿಗೆ ಹೆಜ್ಜೆ ಹೆಜ್ಜೆಗೂ ಅವಮಾನ ಮಾಡಿದವರು ಕಾಂಗ್ರೆಸ್ಸಿಗರು

Next Post

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

February 24, 2026
ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

February 24, 2026
ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

February 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL