ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎಂಎಸ್’ಐಎಲ್ ವತಿಯಿಂದ 1 ಕೋಟಿ ರೂ. ದೇಣಿಗೆ ನೀಡಲಾಗಿದೆ.
ರಾಜ್ಯದಲ್ಲಿ ತುರ್ತು ಸಂದರ್ಭಗಳಲ್ಲಿ, ಅಗತ್ಯವಿರುವವರ ಸಹಾಯಕ್ಕಾಗಿ ಬಳಸುವ ಸಿಎಂ ಪರಿಹಾರ ನಿಧಿಗೆ ಎಂಎಸ್’ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪನವರು 1 ಕೋಟಿ ರೂ.ಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಹಸ್ತಾಂತರಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸಾಗರ ಕ್ಷೇತ್ರದ ಪ್ರವಾಸಿ ತಾಣಗಳ ಪರಿಚಯ ಒಳಗೊಂಡ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು, ಹಾಗೂ ಸೊರಬ ರಸ್ತೆ ಅಗಲೀಕರಣಕ್ಕೆ 30 ಕೋಟಿ ರೂ. ಅನುದಾನ ಬಿಡುಗಡೆಗೊಳಿಸುವಂತೆ ಹಣಕಾಸು ಇಲಾಖೆಗೆ ಆದೇಶಿಸಿದ್ದಾರೆ.
ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್, ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ್, ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಜೆ. ಪುಟ್ಟಸ್ವಾಮಿ, ಸಾಹಿತಿಗಳಾದ ಚಂದ್ರಶೇಖರ್ ಕಂಬಾರ, ಎಂಎಸ್’ಐಎಲ್ ಎಂಡಿ ಪ್ರಕಾಶ್, ವಿನಾಯಕ್ ರಾವ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post