ನವದೆಹಲಿ: ಲೋಕಸಭಾ ಚುಣಾವಣೆಯ ಫಲಿತಾಂಶ ಬಹುತೇಕ ಘೋಷಣೆಯಾಗಿದ್ದು, ವಾರಣಾಸಿಯಿಂದ ಎರಡನೆಯ ಭಾರಿ ಸ್ಪರ್ಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದಿಗ್ವಿಜಯ ದಾಖಲಿಸಿದ್ದು, ದೇಶದ 15ನೆಯ ಪ್ರಧಾನಿಯಾಗಲಿದ್ದಾರೆ.
ವಾರಣಾಸಿ ಕ್ಷೇತ್ರದಿಂದ ಅಭೂತಪೂರ್ವ ಜಯ ದಾಖಲಿಸಿರುವ ಪ್ರಧಾನಿ ಮೋದಿ, ತಮ್ಮ ಸಮೀಪದ ಸ್ಪರ್ಧಿಯನ್ನು 371784 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಇನ್ನು, ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭಾರಿ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ತಮ್ಮ ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಡಾ. ಸಿ. ಜೆ. ಚಾವ್ಡಾ ವಿರುದ್ಧ 5 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಅಮಿತ್ ಶಾ ಗೆಲುವು ಸಾಧಿಸಿದ್ದಾರೆ.
2014ರ ಚುನಾವಣೆಯಂತೆಯೇ ಈ ಬಾರಿಯೂ ಐತಿಹಾಸಿಕ ಜಯ ದಾಖಲಿಸಿರುವ ಹಾಲಿ ಪ್ರಧಾನಿ ನರೇಂದ್ರ ಮೋದಿ ಮುಂದಿನ ಐದು ವರ್ಷಗಳ ಅವಧಿಗೆ ಮತ್ತೆ ಪ್ರಧಾನಿಯಾಗಿ ಮೇ 26ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೇ 26ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ದೇಶದ 15ನೆಯ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ದೇಶ ವಿದೇಶಗಳ ಗಣ್ಯಾತಿಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸ್ಥಳ ಹಾಗೂ ಸಮಯ ಇನ್ನೂ ನಿಗದಿಯಾಗಿಲ್ಲ.
Discussion about this post