ಕಲ್ಪ ಮೀಡಿಯಾ ಹೌಸ್ | ಉಪ್ಪಿನಂಗಡಿ |
ನಿಂತಿದ್ದ ಕಾರಿನ ಮೇಲೆ ಕಂಟೈನರ್ ಲಾರಿಯೊಂದು ಮಗುಚಿ ಬಿದ್ದು ಅಪ್ಪಚ್ಚಿಯಾಗಿದ್ದರು ಪ್ರಯಾಣಿಕರು ಪವಾಡಸದೃವಾಗಿ ಪಾರಾಗಿರುವ ಘಟನೆ ಶಿರಾಡಿ ಬಳಿಯಲ್ಲಿ ನಡೆದಿದೆ.
ನಿನ್ನೆ ಘಟನೆ ನಡೆದಿದ್ದು, ಪ್ರಯಾಣಿಕರು ವಾಂತಿ ಸಮಸ್ಯೆ ಯಿಂದ ಪಾರಾದ ಘಟನೆ ಬರ್ಚಿನಹಳ್ಳದಲ್ಲಿ ನಡೆದಿದೆ.
ದಾವಣಗೆರೆಯ ನಿವಾಸಿಗರಾದ ಗಣೇಶ, ಶಿವು, ಕಾವ್ಯಾ, ದಂಡ್ಯಮ್ಮ ಅವರು ಚಾಲಕ ಅಬ್ದುಲ್ ರಹಿಮಾನ್ ಮುಲ್ಲಾ ಅವರೊಂದಿಗೆ ಶುಕ್ರವಾರ ಧರ್ಮಸ್ಥಳ ಕ್ಷೇತ್ರಕ್ಕೆ ಬಂದವರು ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸಂದರ್ಶನ ಮಾಡಿ ಊರಿಗೆ ಹಿಂದಿರುಗುವ ವೇಳೆ 11.30ಕ್ಕೆ ಬರ್ಚಿನಹಳ್ಳದಲ್ಲಿ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಕಾವ್ಯಾ ಎಂಬವರಿಗೆ ವಾಂತಿ ಬರುತ್ತಿದೆ ಎಂದು ತಿಳಿಸಿದ ಕಾರಣಕ್ಕೆ ಹೆದ್ದಾರಿ ಬದಿಯಲ್ಲಿ ಕಾರನ್ನು ನಿಲ್ಲಿಸಿ ಕಾವ್ಯಾಳನ್ನು ಉಪಚರಿಸಲು ಎಲ್ಲರೂ ಇಳಿದಿದ್ದರು. ಚಾಲಕ ಮೂತ್ರ ವಿಸರ್ಜನೆಗೆ ಹೋಗಿದ್ದರು.
ಈ ವೇಳೆ ಎಲ್ಲರ ಕಣ್ಣೆದುರೇ ಅವರ ಕಾರಿನ ಮೇಲೆ ಕಂಟೈನರ್ ಲಾರಿ ಮಗುಚಿ ಬಿದ್ದು ಕಾರು ಅಪ್ಪಚ್ಚಿಯಾಗಿದೆ.
ಮಹಿಳೆಯೊಬ್ಬರಿಗೆ ವಾಂತಿ ಬಂದ ಕಾರಣ ಎಲ್ಲರೂ ಕೆಳಗಿಳಿದಿದ್ದರು. ಆದ್ದರಿಂದಲೇ ಇವರೆಲ್ಲರೂ ಜೀವ ಉಳಿಸಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post