ದಾವಣಗೆರೆ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಕೇವಲ ಔಪಚಾರಿಕವಾಗಿದ್ದು, ಇದರಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು, ಬೇಡ ಎನ್ನುವುದು ಪಕ್ಷಕ್ಕೆ ಸೇರಿದ ವಿಚಾರ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ವಿರುದ್ದ ಅಸಮಾಧಾನ ಹೊರ ಹಾಕಿ, ಸಮನ್ವಯ ಸಮಿತಿ ಸೇರ್ಪಡೆ ಒಂದು ಮುಖ್ಯವಾದ ವಿಷಯವೇ ಅಲ್ಲ .ಅದನ್ನು ವಿಶ್ವನಾಥ್ ಅವರು ಸಾರ್ವಜನಿಕವಾಗಿ ಚರ್ಚೆ ಮಾಡುವ ಅಗತ್ಯವಿರಲಿಲ್ಲ. ಯಾಕೆ ಹೀಗೆ ಹೇಳಿದ್ದಾರೆ ಎಂದು ನನಗೆ ಅರ್ಥ ಆಗುತ್ತಿಲ್ಲ ಎಂದಿದ್ದಾರೆ. ಈ ವಿಚಾರ ಸಮ್ಮಿಶ್ರ ಸರ್ಕಾರದ ಹೊಂದಾಣಿಕೆಯಲ್ಲಿ ಸಮನ್ವಯದ ಕೊರತೆಯಿದೆ ಎನ್ನುವುದನ್ನು ಸಾಬೀತು ಮಾಡಿದೆ.
Discussion about this post