ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಲಾಕ್ ಡೌನ್ ನಡುವೆಯೂ ಉದ್ಯೋಗ ಸಿಗುತ್ತದೆ ಎಂದು ಆಸೆಯಿಂದ ತೆರಳಿದ್ದ ಉಮೇಶ್ ಎಂಬ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಸಾಗರದ ತ್ಯಾಗರ್ತಿಯಲ್ಲಿ ನಡೆದಿದೆ.
ಲಾಕ್’ಡೌನ್’ನಿಂದ ಜನರು ಕೆಲಸವಿಲ್ಲದೇ ಹಸಿವಿನಿಂದ ನರಳಬಾರದು ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರವು ಪ್ರತಿ ಕುಟುಂಬದ ಪ್ರತಿ ಸದಸ್ಯನಿಗೆ ಎರಡು ತಿಂಗಳ ಮುಂಗಡವಾಗಿ ಪಡಿತರ ವ್ಯವಸ್ಥೆಯನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿ ಮೂಲಕ ನೀಡಿದೆ.
ಈ ಲಾಕ್ ಟೈಮ್ ಸಂದರ್ಭದಲ್ಲಿ ಕಾರ್ಮಿಕರಿಗೆ ಯಾವುದೇ ಕೆಲಸವನ್ನು ನೀಡದರೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಿಸಿದ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ರಾಜ್ಯ ಸರಕಾರವು ಸ್ಪಷ್ಟವಾದ ನಿರ್ದೇಶನವನ್ನು ನೀಡಿದೆ.
ಲಾಕ್ ಡೌನ್ ಸಂದರ್ಭದಲ್ಲಿ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿ ಅವರು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಇಂದು ಇದ್ದಕ್ಕಿದ್ದ ಹಾಗೆ ಉದ್ಯೋಗ ಖಾತ್ರಿ ಕೆಲಸವನ್ನು ಪ್ರಾರಂಭಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಜನರು ಕೆಲಸ ಸಿಗುತ್ತದೆ ಎಂಬ ಆಸೆಯಿಂದ ಉದ್ಯೋಗ ಖಾತ್ರಿಯ ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದರೂ ತ್ಯಾಗರ್ತಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಠ ಸಾಧಿಸಿ ಇಂದು ಉದ್ಯೋಗ ಖಾತ್ರಿ ಕೆಲಸ ಪ್ರಾರಂಭಿಸಿದ್ದಾರೆ ಎಂದು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಆರೋಪಿಸಿದ್ದಾರೆ.
ಕೆಲಸ ಪ್ರಾರಂಭಿಸುವ ಸಂದರ್ಭದಲ್ಲಿ ಗಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸ್ಥಳದಲ್ಲೇ ಇರಬೇಕು. ಆದರೆ ಅವರು ವಿಳಂಬವಾಗಿ ಸ್ಥಳಕ್ಕೆ ಆಗಮಿಸಿದ್ದಾರೆ. ದೇಶದಾದ್ಯಂತ ಕರೋನಾ ಲಾಕ್ ಟೌನ್ ಜಾರಿಯಲ್ಲಿದ್ದರೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯಕ್ಷೇತ್ರದಲ್ಲಿ ವಾಸ ಇದ್ದು ಮುಂಜಾಗೃತ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆದರೆ ಇವರು ತಮ್ಮ ಕಾರ್ಯಕ್ಷೇತ್ರದಲ್ಲಿ ಇರದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪವೂ ಇವರ ಮೇಲೆ ಇದೆ.
ಕೆಲಸದ ಸ್ಥಳದಲ್ಲಿ ಸೂಕ್ತ ಪ್ರಥಮ ಚಿಕಿತ್ಸೆ ವ್ಯವಸ್ಥೆಯನ್ನೂ ಮಾಡಿರಲಿಲ್ಲ. ಬಡವರ ಜೀವಕ್ಕೆ ಬೆಲೆ ಇಲ್ಲವೇ? ಮೃತ ಕಾರ್ಮಿಕ ಉಮೇಶ್ ಸಾವಿಗೆ ಜವಾಬ್ದಾರರು ಯಾರು? ಜಿಲ್ಲಾಧಿಕಾರಿಗಳು ಬಂದು ಪಿಡಿಒ ಇವರ ಮೇಲೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವವರೆಗೂ ಶವವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಸಂಬಂಧಿಕರು ಹಾಗೂ ಗ್ರಾಮಸ್ಥರು ಬಿಗಿ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ತ್ಯಾಗರ್ತಿ ಗ್ರಾಮ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಯಿಂದ ಇಂದು ಬಡ ಕಾರ್ಮಿಕ ಒಬ್ಬನ ಸಾವು ಸಂಭವಿಸಿದೆ ಎಂಬ ಆರೋಪ ಈಗ ಕೇಳಿಬಂದಿದ್ದು, ಇವರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನಕ್ಕೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಾಗಿದೆ.
(ವರದಿ: ಪ್ರಕಾಶ ಮಂದಾರ)
Get in Touch With Us info@kalpa.news Whatsapp: 9481252093
Discussion about this post