No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Sunday, March 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ, ಕೈಕಟ್ಟಿ ಕೂರುವಂತಿಲ್ಲ: ಕಾರ್ಮಿಕರಿಗಾಗಿ ವಿಶೇಷ ಪ್ಯಾಕೇಜ್‍ಗಾಗಿ ಸಿದ್ದರಾಮಯ್ಯ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 20, 2020
in Small Bytes, ರಾಜಕೀಯ
0
ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ, ಕೈಕಟ್ಟಿ ಕೂರುವಂತಿಲ್ಲ: ಕಾರ್ಮಿಕರಿಗಾಗಿ ವಿಶೇಷ ಪ್ಯಾಕೇಜ್‍ಗಾಗಿ ಸಿದ್ದರಾಮಯ್ಯ ಒತ್ತಾಯ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ಗೊತ್ತಿದೆ. ಆದರೂ ಕೈ ಕಟ್ಟಿ ಕೂರುವಂತಿಲ್ಲ. ಲಾಕ್‍ಡೌನ್ ಮುಗಿಯುವವರೆಗೆ ರೈತರು, ಕಾರ್ಮಿಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಅವರು, ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮಾತನಾಡಿದರು.

ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಹೇಳಿ ಬಳಿಕ ಆದೇಶ ವಾಪಸ್ ಪಡೆದಿದ್ದು ಸರಿಯಾಗಿದೆ. ಲಾಕ್‍ಡೌನ್ ನಿಯಮಗಳು ನೂರಕ್ಕೆ ನೂರರಷ್ಟು ಪಾಲನೆ ಆಗಬೇಕು. ಇದರಲ್ಲಿ ಯಾವುದೇ ರಿಯಾಯಿತಿ ಬೇಡ ಎಂದರು.

ಸಭೆಯಲ್ಲಿ ಮುಂದುವರಿದು ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಎರಡು ದಿನಗಳ ಕಾಲ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕೊರೊನಾ ಸೋಂಕು ನಿಯಂತ್ರಿಸುವ ವಿಷಯದಲ್ಲಿ ಸರ್ಕಾರ ಮಾಡಬೇಕಿರುವ ಕೆಲಸಗಳು ಸಾಕಷ್ಟಿದೆ. ಈ ವಿಚಾರದಲ್ಲಿ ಪ್ರತಿಪಕ್ಷವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡಲಿದೆ. ರಾಜ್ಯದಲ್ಲಿ ಅಸಂಘಟಿತ ವಲಯದ 1.32 ಕೋಟಿ ಕಾರ್ಮಿಕರಿದ್ದಾರೆ. ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ 8 ಸಾವಿರ ಕೋಟಿ ರೂ.ಗಳಿದೆ. ತಲಾ ಎರಡು ಸಾವಿರ ರೂ. ನೀಡುವುದಾಗಿ ಮುಖ್ಯಮಂತ್ರಿಯವರು ಹೇಳಿದ್ದಾರೆ. ಇದುವರೆಗೆ 30 ಕೋಟಿ ರೂ. ಮಾತ್ರ ಹಂಚಿಕೆಯಾಗಿದೆ. ಎಲ್ಲ ಕಾರ್ಮಿಕರಿಗೂ ಈ ಸಹಾಯಧನದ ಸೌಲಭ್ಯ ಸಿಗಬೇಕು ಎಂದರು.

ಪ್ಯಾಕೇಜ್ ಘೋಷಣೆ ಮಾಡಿ
ಈ ವರೆಗೆ ಒಂದು ಲಕ್ಷ ಕಾರ್ಮಿಕರಿಗೆ ಮಾತ್ರ ಆಹಾರದ ಪ್ಯಾಕೆಟ್ ಸಿಕ್ಕಿದೆ. ಬೆಂಗಳೂರು ಮಹಾನಗರ ಒಂದರಲ್ಲೇ ಮೂರು ಲಕ್ಷಕ್ಕೂ ಅಧಿಕ ಕಾರ್ಮಿಕರಿದ್ದಾರೆ. ರಾಜ್ಯಾದ್ಯಂತ ಎಲ್ಲ ಕಾರ್ಮಿಕರಿಗೂ ಆಹಾರ ಸಿಗುವಂತೆ ಅಗಬೇಕು. ಮಡಿವಾಳರು, ಸವಿತಾ ಸಮಾಜದವರು, ಕುಂಬಾರರು, ಚಮ್ಮಾರರು, ಮನೆ ಕೆಲಸದವರು ಸೇರಿದಂತೆ ಲಕ್ಷಾಂತರ ಸಂಖ್ಯೆಯಲ್ಲಿರುವ ಸಣ್ಣಪಟ್ಟಣ ಕೆಲಸ ಮಾಡುವ ಕಾರ್ಮಿಕರಿಗೂ ಸರ್ಕಾರದ ನೆರವು ಸಿಗಬೇಕು. ಅವರಿಗೆ ಉದ್ಯೋಗವೂ ಇಲ್ಲ. ಕೈಗೆ ಹಣವೂ ಬರುತ್ತಿಲ್ಲ ಎಂದು ವಿವರಿಸಿದರು. ಈ ವರ್ಗದ ಜನರಿಗಾಗಿಯೇ ಒಂದು ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕೊರೊನಾ ಸೋಂಕು ನಿಯಂತ್ರಿಸುವ ವಿಚಾರದಲ್ಲಿ ಬೇರೆ ರಾಜ್ಯಗಳ ಮಾದರಿಯನ್ನು ನಾವು ಅನುಸರಿಸುವುದು ಸೂಕ್ತ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಪರೀಕ್ಷೆ ಪ್ರಮಾಣ ಕಡಿಮೆ ಇದೆ. ಆ ಕುರಿತು ಸಿಎಂ ಗಮನ ಹರಿಸಬೇಕು. ಕೊರೊನಾ ವಿಚಾರದಲ್ಲಿ ಒಂದು ಸಮುದಾಯದವರನ್ನು ಮಾತ್ರ ಗುರಿಯಾಗಿಟ್ಟುಕೊಂಡು ಕೆಲ ಶಾಸಕರು, ಸಂಸದರು ಟೀಕೆ ಮಾಡುತ್ತಿದ್ದಾರೆ. ನೀವೇ (ಸಿಎಂ) ಮನವಿ ಮಾಡಿಕೊಂಡರೂ ಹೇಳಿಕೆ ಕೊಡುವುದನ್ನು ಕೆಲವರು ನಿಲ್ಲಿಸುತ್ತಿಲ್ಲ. ಅಂಥವರ ವಿರುದ್ಧ ಕ್ರಿಮಿನಲ್ ಕೇಸು ದಾಖಲು ಮಾಡಿ. ಈ ವಿಷಯದಲ್ಲಿ ಪೊಲೀಸರ ಮೌನವೂ ಸರಿಯಲ್ಲ ಎಂದರು.

ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತಿತರ ಕಡೆ ಭತ್ತ ಇಳುವರಿಗೆ ಬರುತ್ತಿದೆ. ಆದರೆ ಖರೀದಿ ಮಾಡುವವರು ಇಲ್ಲದೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಭತ್ತ ಖರೀದಿಗೆ ಸೂಕ್ತವಾದ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಸಹಕಾರ ಸಂಘ ಸಂಸ್ಥೆಗಳಿಗೆ ಆ ಜವಾಬ್ದಾರಿ ವಹಿಸುವ ಬಗ್ಗೆ ಆಲೋಚಿಸಬೇಕು. ಹಣ್ಣು, ತರಕಾರಿ, ರೇಷ್ಮೆ ಬೆಳೆಗಾರರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಬಗ್ಗೆ ಗಂಭೀರವಾದ ಕ್ರಮಗಳಾಗಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದರು ಎಂದರು.

ನೇಕಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಮುಖ್ಯಮಂತ್ರಿಯವರ ಗಮನ ಸೆಳೆದ ಅವರು, ಮಗ್ಗಗಳನ್ನು ಹೊಂದಿರುವ ನೇಕಾರರು ಬಟ್ಟೆ ಖರೀದಿಗೆ ಮಾಡುವವರು ಇಲ್ಲದೆ ಪರದಾಡುತ್ತಿದ್ದಾರೆ. ಅವರ ಬಗ್ಗೆಯೂ ಗಮನ ಹರಿಸಿ ಎಂದರು.

ಪಡಿತರ ಕಾರ್ಡ್ ಇಲ್ಲದವರು, ಅದಕ್ಕಾಗಿ ಅರ್ಜಿ ಸಲ್ಲಿಸಿದವರು ಹಾಗೂ ಅರ್ಜಿ ಸಲ್ಲಿಸದೇ ಇರುವವರಿಗೂ ದವವ, ಧಾನ್ಯ ಕೊಡಿ ಎಂದು ಒತ್ತಾಯಿಸಿದರು.

ಸಂಘ, ಸಂಸ್ಥೆಗಳಿಗೆ ಧನ್ಯವಾದ
ಕಾರ್ಮಿಕರು, ಬಡವರಿಗೆ ಆಹಾರ ಒದಗಿಸುವಲ್ಲಿ ಖಾಸಗಿ ಸಂಘ, ಸಂಸ್ಥೆಗಳ ಪಾತ್ರ ಹಿರಿದು. ಆ ಸಂಸ್ಥೆಗಳು ಇಲ್ಲದೇ ಹೋಗಿದ್ದರೆ ಆಹಾರ ಒದಗಿಸುವುದು ಸರ್ಕಾರಕ್ಕೆ ಇನಷ್ಟು ಸವಾಲು ಅಗುತ್ತಿಲ್ಲ. ಇದಕ್ಕಾಗಿ ಸಂಘ, ಸಂಸ್ಥೆಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಹಿರಿಯ ನಾಯಕರಾದ ರಮೇಶ್ ಕುಮಾರ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಆರ್.ವಿ. ದೇಶಪಾಂಡೆ, ಡಾ. ಜಿ. ಪರಮೇಶ್ವರ, ವಿ.ಎಸ್. ಉಗ್ರಪ್ಪ, ಸಂಸದ ಡಿ.ಕೆ. ಸುರೇಶ್, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಅಜಯಸಿಂಗ್ ಅವರು ನಿಯೋಗದಲ್ಲಿದ್ದರು.

(ವರದಿ: ಡಿ.ಎಲ್. ಹರೀಶ್)

Get in Touch With Us info@kalpa.news Whatsapp: 9481252093

Tags: BENGALURUCM B S YediyurappaCoronavirusKannadaNewsWebsiteLatestNewsKannadaSiddaramaiahಬೆಂಗಳೂರುಸಿಎಂ ಬಿ.ಎಸ್. ಯಡಿಯೂರಪ್ಪ
Share202Tweet123Send
Previous Post

ಚೀನಾ ವೈರಸ್’ನಿಂದ ವಿಶ್ವದ ಆರೋಗ್ಯ ಕಸಿದ ಚೀನಾಕ್ಕೆ ಭಾರತ ಸರ್ಕಾರದ ಹೊಡೆತ

Next Post

ಪಾದರಾಯನಪುರ ಘಟನೆ: 54 ಜನರ ಬಂಧನ, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಆದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಪಾದರಾಯನಪುರ ಘಟನೆ: 54 ಜನರ ಬಂಧನ, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಆದೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL