ರಾಯಚೂರು: ಕಲಿಯುಗ ಕಾಮಧೇನು ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 347ನೆಯ ಆರಾಧನಾ ಮಹೋತ್ಸವವನ್ನು ಮಂತ್ರಾಲಯದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ.
ಇಂದು ಮಧ್ಯಾರಾಧನೆ ನಿಮಿತ್ತ, ಪ್ರಾತಃಕಾಲದಲ್ಲಿ ನಿರ್ಮಾಲ್ಯ ವಿಸರ್ಜನೆ ನಡೆಸಿ, ವಿಶೇಷ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು.
ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು, ರಾಯರ ಮೂಲ ಬೃಂದಾವನಕ್ಕೆ ಮಹಾ ಪಂಚಾಮೃತ ಅಭಿಷೇಕ ನೆರವೇರಿಸಿದರು.
ಮಧ್ಯಾರಾಧನೆ ಹಿನ್ನೆಲೆಯಲ್ಲಿ ರಾಯರ ಮೂಲ ಬೃಂದಾನವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ವಿಶೇಷವೆಂದರೆ, ತಿರುಪತಿಯಿಂದ ತರಲಾಗಿದ್ದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಲಾಯಿತು. ಇದಕ್ಕೂ ಮುನ್ನ, ಸುಬುಧೇಂದ್ರ ಶ್ರೀಗಳು ಶೇಷವಸ್ತ್ರವನ್ನು ತಲೆಯ ಮೇಲೆ ಹೊತ್ತು ಮಠದ ಪ್ರಾಂಗಣದಲ್ಲಿ ನಡೆದ ವೈಭವ ಮೆರವಣಿಗೆಯಲ್ಲಿ ಸಾಗಿದರು.
ಇನ್ನು, ದೇಶ ಹಾಗೂ ವಿದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಇಂದು ಮಂತ್ರಾಲಯಕ್ಕೆ ಆಗಮಿಸಿ, ರಾಯರ ದರ್ಶನ ಪಡೆದು ಧನ್ಯರಾಗುತ್ತಿದ್ದಾರೆ. ನಾಳೆ ಉತ್ತರಾರಾಧನೆ ನಡೆಯಲಿದ್ದು, ವೈಭವಯುತವಾಗಿ ರಥೋತ್ಸವ ನಡೆಯಲಿದೆ.
Discussion about this post