No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಕಾನೂನು ಕಲ್ಪ

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

kalpa News by kalpa News
September 27, 2025
in ಕಾನೂನು ಕಲ್ಪ
0
ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |ಹಿಂದೂ ಅವಿಭಜಿತ ಕುಟುಂಬದ ಕರ್ತನಿಗೆ ಅಂದರೆ ಯಜಮಾನನಿಗೆ, ಕೂಡು ಕುಟುಂಬದ ಆಸ್ತಿ ಮಾರಾಟ ಮಾಡಲು ವಿಶಾಲವಾದ ವಿವೇಚನಾ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಕಲಬುರ್ಗಿ ಜಿಲ್ಲೆಯ ಬಬಲಾದ್ ಗ್ರಾಮದಲ್ಲಿ 1995ನೇ ಇಸವಿಯಲ್ಲಿ ಹಿಂದೂ ಅವಿಭಜಿತ ಕುಟುಂಬದ ಯಜಮಾನರೊಬ್ಬರು ತಮ್ಮ ಕುಟುಂಬಕ್ಕೆ ಸೇರಿದ ಜಮೀನನ್ನು ಮಗಳ ಮದುವೆಯ ವೆಚ್ಚ ಭರಿಸಲು ಮಾರಾಟ ಮಾಡಿದ್ದರು. ಈ ಮಾರಾಟವನ್ನು ಪ್ರಶ್ನಿಸಿ, ಯಜಮಾನನ ಐವರು ಮಕ್ಕಳಲ್ಲಿ, ಓರ್ವ ಮಗ ನ್ಯಾಯಾಲಯದ ಮೆಟ್ಟಲೇರಿದ್ದರು. ನನ್ನ ತಂದೆ ಕುಡಿತ ಮೊದಲಾದ ತಮ್ಮ ದುಶ್ಚಟಗಳಿಗೆ ಹಣ ಹೊಂದಿಸಲು, ನಮಗೆ ಅರಿವಿಲ್ಲದಂತೆ ಒಟ್ಟು ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ವಿಚಾರಣಾ ನ್ಯಾಯಾಲಯ ನೀಡಿದ ತೀರ್ಪನ್ನು ಮಾನ್ಯ ಕರ್ನಾಟಕ ಹೈಕೋರ್ಟ್ ವಜಾ ಮಾಡಿ, ಈ ಮಾರಾಟವನ್ನು ರದ್ದು ಮಾಡುವಂತೆ ಆದೇಶ ನೀಡಿತ್ತು. ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಮಾನ್ಯ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ಇತ್ತೀಚಿಗೆ ಪ್ರಕಟಿಸಿದ ಮಾನ್ಯ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ, ಸಾಕಾರಣಗಳಿಗೆ ಹಾಗು ಅವಿಭಜಿತ ಕುಟುಂಬದ ಹಿತಾಸಕ್ತಿಯನ್ನು ಕಾಯುವ ಸದುದ್ದೇಶಗಳಿಗೆ, ಕುಟುಂಬದ ಆಸ್ತಿ ಮಾರಾಟ ಮಾಡುವ ಅಧಿಕಾರ ಕರ್ತನಿಗಿದೆ ಎಂದು ಅಭಿಪ್ರಾಯಪಟ್ಟಿದೆ. ಆದರೆ ಕರ್ತನಿಗಿರುವ ಅಧಿಕಾರದ ಬಳಕೆ ಸದುದ್ದೇಶಕ್ಕೆ ಆಗಿದೆಯಾ ಎಂಬುದು ಆಯಾ ಪ್ರಕರಣದ ವಾಸ್ತವಾಂಶಗಳ ಮೇಲೆ ನಿರ್ಧಾರವಾಗುತ್ತದೆ.

ಸಾಮಾನ್ಯವಾಗಿ, ಇಂತಹ ಪ್ರಕರಣಗಳಲ್ಲಿ ಮಾರಾಟ ಸದುದ್ದೇಶಗಳನ್ನು ಪೂರೈಸಲು ನಡೆಯಿತು ಎಂದು ಸಾಬೀತು ಮಾಡುವ ಹೊಣೆಗಾರಿಕೆ ಆಸ್ತಿ ಕೊಂಡವನದ್ದಾಗಿರುತ್ತದೆ. ಆದರೆ ಭಾರತೀಯ ಸಾಕ್ಷ್ಯ ಕಾಯಿದೆಯ ಸೆಕ್ಷನ್ 106 ರ ಪ್ರಕಾರ  “ಯಾವುದೇ ಸತ್ಯವು ಒಬ್ಬ ವ್ಯಕ್ತಿಯ ವಿಶೇಷ ಜ್ಞಾನದಲ್ಲಿರುವಾಗ, ಆ ಸತ್ಯವನ್ನು ಸಾಬೀತುಪಡಿಸುವ ಹೊರೆ ಆ ವ್ಯಕ್ತಿಯ ಮೇಲಿರುತ್ತದೆ” ಎಂದು ಹೇಳುತ್ತದೆ. ಇದರರ್ಥ ನಿರ್ದಿಷ್ಟ ಮಾಹಿತಿ ಒಬ್ಬ ವ್ಯಕ್ತಿಗೆ ಮಾತ್ರ ತಿಳಿದಿದ್ದರೆ, ನ್ಯಾಯಾಲಯದಲ್ಲಿ ಆ ಮಾಹಿತಿಯನ್ನು ಸಾಬೀತುಪಡಿಸುವ ಜವಾಬ್ದಾರಿ ಆ ವ್ಯಕ್ತಿಯದ್ದಾಗಿರುತ್ತದೆ. ಹಾಗಾಗಿ ಈ ಪ್ರಕರಣದಲ್ಲಿ, Burden of Proof ಅಂದರೆ ಪುರಾವೆಯ ಹೊಣೆ ಆಸ್ತಿಯ ಖರೀದಿದಾರನದಲ್ಲ, ಬದಲಾಗಿ ಆಸ್ತಿ ಮಾರಾಟದ ಉದ್ದೇಶವನ್ನು ಪ್ರಶ್ನಿಸುತ್ತಿರುವ ಆದರೆ ಆ ಅವಿಭಜಿತ ಕುಟುಂಬದ ಭಾಗವೇ ಆಗಿರುವ ಮೇಲ್ಮನವಿದಾರನದ್ದಾಗಿದೆ. ಹಾಗಾಗಿ, ಈ ಪ್ರಕರಣದಲ್ಲಿ Reverse Burden of Proof ಅಂದರೆ ಪುರಾವೆಯ ಹಿಮ್ಮುಖ ಹೊರೆ ಮೇಲ್ಮನವಿದಾರ ಅಂದರೆ ಖರೀದಿಯನ್ನು ಪ್ರಶ್ನಿಸಿರುವ ಅವಿಭಜಿತ ಕುಟುಂಬದ ಕರ್ತನ ಮಗನದ್ದಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
1991ನೇ ಇಸವಿಯಲ್ಲಿ ನಡೆದ ಮಗಳ ಮದುವೆಗೆ ಮಾಡಿದ ಸಾಲ ತೀರಿಸಲು ಆಸ್ತಿ ಮಾರಾಟ ಮಾಡಬೇಕಾಯಿತು ಎಂಬ ವಾದವನ್ನು ಮನ್ನಿಸಿದ ಸುಪ್ರೀಂ ಕೋರ್ಟ್, ಸಾಮಾನ್ಯವಾಗಿ ವಿವಾಹ ವೆಚ್ಚಗಳಿಗೆ ಮಾಡುವ ಸಾಲವನ್ನು ತೀರಿಸಲು ಕುಟುಂಬಗಳಿಗೆ ಸಾಕಷ್ಟು ಸಮಯ ಬೇಕು. ಹಾಗಾಗಿ 1991ನೇ ಇಸವಿಯಲ್ಲಿ ನಡೆದ ಮದುವೆಯ ಸಾಲವನ್ನು ತೀರಿಸಲು 1995ನೇ ಇಸವಿಯಲ್ಲಿ ಆಸ್ತಿ ಮಾರಾಟ ಮಾಡಿರುವುದು, ಅವಿಭಜಿತ ಕುಟುಂಬದ ಹಿತಾಸಕ್ತಿಗಳಿಗೆ ಪೂರಕವಾಗಿದ್ದು, ಇಂತಹ ತೀರ್ಮಾನಗಳನ್ನು ತೆಗೆದುಕೊಳ್ಳಲು ಕುಟುಂಬದ ಕರ್ತನಿಗೆ ಅಧಿಕಾರವಿದೆ ಎಂದು ಮಾನ್ಯ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಆಸ್ತಿ ಮಾರಾಟವಾದ ಐದು ವರ್ಷಗಳ ನಂತರ ಮೇಲ್ಮನವಿದಾರ ವಿಚಾರಣಾ ನ್ಯಾಯಾಲಯದಲ್ಲಿ ಈ ಕುರಿತು ದಾವೆ ಹೂಡಿರುವುದು ಅನುಮಾನಗಳಿಗೆ ದಾರಿ ಮಾಡಿಕೊಡುವಂತಿದೆ, ಎಂದೂ ಕೂಡ ಮಾನ್ಯ ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ.

ಆತ್ಮೀಯ ಓದುಗರೇ,
ಕಲ್ಪ ಮೀಡಿಯಾ ಹೌಸ್(ರಿ.) ಅಡಿಯಲ್ಲಿ ಪ್ರಕಟವಾಗುತ್ತಿರುನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ನಮ್ಮ ಓದುಗರಿಗಾಗಿ `ಕಾನೂನು ಕಲ್ಪ’ ಎಂಬ ಹೊಸ ಅಂಕಣವನ್ನು ಆರಂಭಿಸಲಾಗಿದ್ದು, ಪ್ರತಿ ಶುಕ್ರವಾರ ಪ್ರಕಟವಾಗಲಿದೆ. ಶಿವಮೊಗ್ಗ-ಭದ್ರಾವತಿಯ ಖ್ಯಾತ ವಕೀಲರು ಹಾಗೂ ಹಿರಿಯ ಪತ್ರಕರ್ತರೂ ಆಗಿರುವ ಶ್ರೀ ವೀರೇಂದ್ರ ಪಿ.ಎಂ. ಅವರು ಯಾವುದೇ ರೀತಿಯ ಕಾನೂನು ಸಮಸ್ಯೆಗಳು, ಕಾನೂನಿನ ಕುರಿತಾಗಿನ ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕರು ತಮಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದರೆ ನಮಗೆ ಕಳುಹಿಸಬಹುದು. ಆ ಪ್ರಶ್ನೆಗಳಿಗೆ ವಕೀಲರಾದ ಶ್ರೀ ವೀರೇಂದ್ರ ಪಿ.ಎಂ. ಅವರು ಉತ್ತರ ನೀಡಲಿದ್ದಾರೆ. ನಿಮ್ಮ ಪ್ರಶ್ನೆಗಳು ಸ್ಪಷ್ಟ, ಸ್ಪುಟ, ನೇರವಾಗಿರಲಿ.

ನಿಮ್ಮ ಪ್ರಶ್ನೆಗಳನ್ನು ಈ ಕೆಳಗಿನ ವಾಟ್ಸಪ್ ಸಂಖ್ಯೆ 9481252093 (ವಾಟ್ಸಪ್ ಮಾತ್ರ) ಅಥವಾ ಇ-ಮೇಲ್ info@kalpa.news ಗೆ ಕಳುಹಿಸಬಹುದು.  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2025/09/Vedic-Maths-New.mp4

https://kalpa.news/wp-content/uploads/2024/04/VID-20240426-WA0008.mp4

  

Tags: Advocate VeerendraHigh CourtHinduKalburgiKannada News WebsiteLatest News KannadaLegal adviceLegal HelpPropertySupreme CourtUndivided familyಅವಿಭಜಿತ ಕುಟುಂಬಆಸ್ತಿಕಲಬುರ್ಗಿನ್ಯಾಯಾಲಯಸುಪ್ರೀಂ ಕೋರ್ಟ್ಹಿಂದೂಹೈಕೋರ್ಟ್‌
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

Next Post

ಸೆ.29 | ಕನ್ನಡ ಸಾಹಿತ್ಯ ವೈಚಾರಿಕ ಪ್ರಜ್ಞೆ ವಿಚಾರ ಸಂಕಿರಣ

kalpa News

kalpa News

Next Post
ಎ.9ರಂದು ಎನ್ಇಎಸ್ ನೌಕರರಿಗೆ ‘ಅಮೃತ ಕ್ರೀಡೋತ್ಸವ’

ಸೆ.29 | ಕನ್ನಡ ಸಾಹಿತ್ಯ ವೈಚಾರಿಕ ಪ್ರಜ್ಞೆ ವಿಚಾರ ಸಂಕಿರಣ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL