No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಪಕ್ಷಮಾಸದ ಮಹತ್ವ: ಶ್ರೀ ಗಯಾ ಗದಾಧರ ಸ್ತೋತ್ರ

kalpa News by kalpa News
September 24, 2019
in Special Articles
0
ಪಕ್ಷಮಾಸದ ಮಹತ್ವ: ಶ್ರೀ ಗಯಾ ಗದಾಧರ ಸ್ತೋತ್ರ
Share on FacebookShare on TwitterShare on WhatsApp

ಶ್ರಾದ್ಧ ಭೂಮಿಂ ಗಯಾಂ ಧ್ಯಾತ್ವಾ ಧ್ಯಾತ್ವಾ ದೇವಂ ಗದಾಧರಮ್
ವಸ್ವಾದೀಂಶ್ಚ ಪಿತ್ರೂನ್ ಧ್ಯಾತ್ವಾ ತತಃ ಶ್ರಾದ್ಧಂ ಪ್ರವರ್ತಯೇ ॥

ಸುಪುತ್ರ: ಮಾತಾಪಿತ್ರೋಣ ವಚನಕೃದ್ ಹಿತಃ ಪಧ್ಯಶ್ಚ ಯಃ ಸುತಃ
ತಂದೆ ತಾಯಿಗಳ ಹಿತವನ್ನು ಬಯಸಿ ವೇದೋಕ್ತ ಕರ್ಮಗಳನ್ನು ಮಾಡಿದವನು ಸತ್ಪುತ್ರ ಎನಿಸುವನು.
ಶರೀರ: ಶೀರ್ಯತೆ ಇತಿ ಶರೀರಂ ಅಂದರೆ, ಸ್ಥೂಲ ಶರೀರ ನಾಶವಾಗುವ ಸ್ವಭಾವವುಳ್ಳದ್ದು.
ದೇಹ: ದಹ್ಯತೇ ಇತಿ ದೇಹ ಅಂದರೆ, ಬೆಂಕಿಯಲ್ಲಿ ಹಾಕಿ ಸುಡುವ ಇಂಧನ ಈ ದೇಹ.
ಮರ್ತ್ಯ: ಮರಣ ಶೀಲ ಅಂದರೆ, ಸಾಯುವುದೇ ಸ್ವಭಾವ. ಹುಟ್ಟಿದ ಕೂಡಲೇ ನಮ್ಮ ಪಯಣ ಯಮಧರ್ಮರಾಜರ ಕಡೆಗೆ…
ಮೇಲ್ಕಂಡ ಮೂರು ಶಬ್ದಗಳಿಂದ ನಮ್ಮನ್ನು ಕರೆಯುವುದು ನಮ್ಮ ಸ್ವಭಾವ ತಿಳಿಯುವುದೇ ಆಗಿದೆ.

ಗಯಾ ಶ್ರಾದ್ಧ ಮಹಿಮಾ
ಗಯಾ ಎಂಬುವನು ಒಬ್ಬ ರಾಕ್ಷಸ. ಇವನು ಶ್ರೀ ಮಹಾವಿಷ್ಣುವಿನ ಭಕ್ತ. ವಿಶೇಷವಾಗಿ ಶ್ರೀ ಮಹಾವಿಷ್ಣುವನ್ನು ಕುರಿತು ತಪಸ್ಸು ಮಾಡಿ ಬೇರಾರಿಂದಲೂ ಜಯಿಸಲಶಕ್ಯವಾದ ಶಕ್ತಿಯನ್ನು ಪಡೆದಿದ್ದನು.

ರಾಕ್ಷಸತ್ವ ಗುಣದಿಂದ ಕೂಡಿದ್ದುದರಿಂದ ತಪಃಶಕ್ತಿಯನ್ನು ಪಡೆದಿದ್ದರೂ ರಜೋ ಗುಣ ಭೂಯಿಷ್ಠನಾಗಿ, ಅಹಂಕಾರದಿಂದ ಮೆರೆಯುವ ದೇವತೆಗಳನ್ನೂ ಬಿಡದೇ ಬಿಡದಂತೆ ಎಲ್ಲರಿಗೂ ನಾನಾ ರೀತಿಯಾದ ತೊಂದರೆಯನ್ನು ಉಂಟು ಮಾಡುತ್ತಿದ್ದನು. ಇವನ ಹಿಂಸೆಯನ್ನು ಸಹಿಸಲಾರದೇ ದೇವತೆಗಳು ಶ್ರೀ ಚತುರ್ಮುಖ ಬ್ರಹ್ಮದೇವರಲ್ಲಿ ಏನಾದರೂ ಮಾಡಿ ನಾಶಪಿಡಿಸಬೇಕೆಂದು ಮೊರೆಯಿಟ್ಟರು.

ಆಗ ಶ್ರೀ ಚತುರ್ಮುಖ ಬ್ರಹ್ಮದೇವರು ಶ್ರೀ ಮಹಾವಿಷ್ಣುವಿನ ಅನುಗ್ರಹಕ್ಕೆ ಪಾತ್ರನಾದ ಇವನನ್ನು ತಾನು ಏನೂ ಮಾಡಲಾರನೆಂದರಿತು ಶ್ರೀ ಮಹಾವಿಷ್ಣುವಿನಲ್ಲೇ ಮೊರೆ ಹೋಗಿ. ಇದಕ್ಕೆ ಒಂದು ಉಪಾಯವನ್ನು ತಿಳಿಸಬೇಕೆಂದು ಪ್ರಾರ್ಥಿಸುತ್ತೇನೆ.

ಆಗ ಶ್ರೀ ಮಹಾವಿಷ್ಣುವು ತನ್ನ ಭಕ್ತನಾದ ಗಯಾಸುರನ ವಿಷಯದಲ್ಲಿ ವಿಶೇಷವಾದ ಕೃಪೆಯಿಂದ ಕೂಡಿದವನಾಗಿ, ತನ್ನಲ್ಲಿ ಶರಣು ಹೋದ ಶ್ರೀ ಚತುರ್ಮುಖ ಬ್ರಹ್ಮಾದಿಗಳಿಗೂ ಅನುಗ್ರಹ ಮಾಡುವ ಸಲುವಾಗಿ ಶ್ರೀ ಮಹಾವಿಷ್ಣುವು ಒಬ್ಬ ಬ್ರಾಹ್ಮಣನ ವೇಷವನ್ನು ಧರಿಸಿ, ಗಯಾಸುರನ ಬಳಿ ಹೋಗಿ ತಾನು ಒಂದು ಮಹತ್ತರವಾದ ವೈಷ್ಣವ ಯಜ್ಞವನ್ನು ಮಾಡಬೇಕೆಂದು ಅದಕ್ಕೆ ಸ್ಥಳವಾವುದೂ ಸಿಗದಿರುವುದರಿಂದ, ಎಲೈ ಗಯನೇ ನೀನೆ ಅಂಥಹ ಸ್ಥಳವೊಂದನ್ನು ತೋರಿಸಿ ಕೊಡಬೇಕೆಂದು ಹೇಳಿದನು!

ಆಗ ಶ್ರೀಮಹಾವಿಷ್ಣು ಭಕ್ತನಾದ ಗಯನು ವೈಷ್ಣವ ಯಾಗಕ್ಕೆ ತನ್ನ ದೇಹವನ್ನೇ ಅರ್ಪಿಸುವುದಾಗಿ ತೀರ್ಮಾನಿಸಿ ತನ್ನ ಎದೆಯ ಮೇಲೆ ಯಜ್ಞ ಕುಂಡವನ್ನು ನಿರ್ಮಿಸಿ ಅಲ್ಲಿಯೇ ಶ್ರೀಮಹಾವಿಷ್ಣು ಪ್ರೀತಿಗಾಗಿ ಈ ವೈಷ್ಣವ ಯಜ್ಞವನ್ನು ಮಾಡಬಹುದೆಂದು ಹೇಳಿ ಮಲಗಿದನು.

ಆ ಕೂಡಲೇ ಶ್ರೀಚತುರ್ಮುಖ ಬ್ರಹ್ಮದೇವರು ಅವನ ಎದೆಯ ಮೇಲೆ ಹಾಸುಗಲ್ಲನ್ನೊಂದು ಇಟ್ಟು ಅದರ ಮೇಲೆ ಯಜ್ಞ ಕುಂಡವನ್ನು ನಿರ್ಮಿಸಿದರು. ಆಗ ಗಯನ ಉಸಿರಾಟದ ಕಾರಣ ಯಜ್ಞ ಕುಂಡವು ಅಲಗಾಡಿತು. ಅದನ್ನು ಕಂಡ ಶ್ರೀ ಬ್ರಹ್ಮದೇವರು, ಕುಂಡವನ್ನು ಸ್ಥಿರಗೊಳಿಸಬೇಕೆಂದು ಶ್ರೀ ಹರಿಯಲ್ಲಿ ಪ್ರಾರ್ಥಿಸಿದನು.

ಅದೇ ಸಮಯದಲ್ಲಿ ತನ್ನ ಮೇಲಿನ ಭಕ್ತಿಯಿಂದ ದುಷ್ಟವಾದ ರಾಕ್ಷಸ ಜನ್ಮದಲ್ಲಿ ಹುಟ್ಟಿದ್ದರೂ ತನ್ನ ಮರಣವನ್ನೇ ಲಕ್ಷ್ಯ ಮಾಡದೇ ಯಜ್ಞಾರ್ಥವಾಗಿ ತನ್ನ ದೇಹವನ್ನೇ ಅರ್ಪಿಸಿದ ತನ್ನ ಭಕ್ತನಿಗೆ ಶಾಶ್ವತವಾದ ವೈಕುಂಠ ಲೋಕವನ್ನೇ ಅನುಗ್ರಹಿಸಿ ಕೊಡಬೇಕೆಂದು ತೀರ್ಮಾನಿಸಿ ತನ್ನ ಬಲ ಪಾದವನ್ನು ಅವನ ಎದೆಯ ಮೇಲಿರುವ ಯಜ್ಞ ಕುಂಡದಲ್ಲಿಟ್ಟು ನಿಂತು ಕೊಂಡನು!

ತನ್ನ ನಿಜ ಸ್ವರೂಪವನ್ನು ತೋರಿಕೊಂಡನು. ಆ ಕೂಡಲೇ ಶ್ರೀಪರಮಾತ್ಮನ ಸಂಸರ್ಗದಿಂದ ಸತ್ವ ಗುಣ ಭೂಯಿಷ್ಠನಾದ ಗಯಾಸುರನು ಶ್ರೀ ಹರಿಯನ್ನು ಕಂಡು ಅವನಲ್ಲಿ ಬೇಡುತ್ತಾನೆ.

ಸ್ವಾಮಿ! ನಾನು ಇಷ್ಟುದಿನ ಮಾಡಿದ ತಪಸ್ಸಿನ ಫಲವು ಇಂದು ಲಭಿಸಿತು. ನನಗೆ ಇಂದು ನೀವು ಮುಕ್ತೈಶ್ವರ್ಯವನ್ನು ಕರುಣಿಸಿ ಕೊಡಿ. ನಿಮ್ಮ ಪಾದದಿಂದ ಅಂಕಿತವಾಗಿರುವ ಸ್ಥಳವು ಗಯಾ ಕ್ಷೇತ್ರ ವೆಂದು ಪ್ರಸಿದ್ಧಿಗೆ ಬರಲಿ! ನಿಮ್ಮ ಪಾದದ ಅಂಕನವು ಎಂದೆಂದಿಗೂ ಅಳಿಯದಂತೆ ನಿಮ್ಮ ಸಂಪೂರ್ಣ ಸನ್ನಿಧಾನದಿಂದ ಇಲ್ಲಿರಲಿ. ನನಗೆ ಮಾತ್ರವಲ್ಲದೆ ಯಾವುದೇ ಚೇತನವನ್ನು ಉದ್ಧೇಶಿಸಿ ಯಾರೇ ಪಿಂಡ ದಾನ ಮಾಡಿದರೂ ಅವರೆಲ್ಲರಿಗೂ ನೀವು ಮುಕ್ತಿಯನ್ನು ಅನುಗ್ರಹಿಸಿರಿ.

ಇಲ್ಲಿ ವಾಸಿಯುವ ನನ್ನ ವಂಶದ ಬ್ರಾಹ್ಮಣರನ್ನು ಅಸುರನ ವಂಶದವರೆಂದು ಯಾರೊಬ್ಬರೂ ತಿರಸ್ಕರಿಸದೇ ಅವರಿಗೆ ಮನ್ನಣೆ ನೀಡಿ ಅವರನ್ನೇ ಶ್ರಾದ್ಧದಲ್ಲಿ ನಿಮಂತ್ರಿತರಾಗಿ ವರಿಸಿ ಪಿತೃಗಳ ಉದ್ಧೇಶ್ಯವಾಗಿ ಶ್ರಾದ್ಧ ಮಾಡಲಿ. ಇದರಿಂದ ಪಿತೃಗಳು ಸಂತುಷ್ಟರಾಗಲಿ. ಉದ್ಧಿಷ್ಟರಾದ ಚೇತನರು ಮುಕ್ತಿಯನ್ನು ಪಡೆಯಲಿ. ಈ ನನ್ನ ವಂಶದ ಬ್ರಾಹ್ಮಣರಿಗೆ ಶ್ರಾದ್ಧಾನ್ನ ಭೋಜನ ಮಾಡಿದ ದೋಷವು ತಟ್ಟದಿರಲಿ.

ನಾನು ತಲೆಯಿಟ್ಟಿರುವ ಸ್ಥಳವು ಗಯಾ ಶಿರಸ್ ಎಂದು ಪ್ರಸಿದ್ಧವಾದ ಪುಣ್ಯಕ್ಷೇತ್ರವಾಗಲಿ. ಇಲ್ಲಿ ಪಿತೃಗಳನ್ನು ಉದ್ಧೇಶಿಸಿ ಮಾಡಿದ ಪಿಂಡ ದಾನಗಳು ಪಿತೃಗಳಿಗೆ ಸಂತೋಷವನ್ನುಂಟು ಮಾಡಲಿ ಎಂದು ವರವನ್ನು ಬೇಡಿದನು. ಆ ಕೂಡಲೇ ಶ್ರೀ ಮಹಾವಿಷ್ಣುವು ತಥಾಸ್ತು (ಹಾಗೆ ಆಗಲಿ) ಎಂದು ಅನುಗ್ರಹಿಸಿ ತಕ್ಷಣದಲ್ಲಿ ಮುಕ್ತಿಯನ್ನೂ ಅನುಗ್ರಹಿಸಿದನು.

ಆದುದರಿಂದ ಈ ಕ್ಷೇತ್ರದಲ್ಲಿ ಮೃತಿ ಹೊಂದಿರುವ ಯಾವುದೇ ಚೇತನರನ್ನು ಉದ್ಧೇಶಿಸಿ ಶ್ರಾದ್ಧ, ಪಿಂಡ ದಾನಗಳನ್ನು ಮಾಡಿದರೂ ಅವರಿಗೆ ಮುಕ್ತಿ ಸಿದ್ಧ ಅಂತೆಯೇ ಪಿತೃಗಳೂ ವಿಶೇಷವಾದ ಸಂತೋಷವನ್ನು ಹೊಂದುತ್ತಾರೆ.

ಜೀವಂತವಾಗಿರುವ ಚೇತನರು ಪೂರ್ವದಲ್ಲಿ ತಾವು ಅನೇಕ ಜನ ಗಂಡು ಮಕ್ಕಳನ್ನು ಪಡೆದುಕೊಳ್ಳಬೇಕೆಂದು ಇಚ್ಛಿಸುತ್ತಿದ್ದರು. ಏಕೆಂದರೆ ಅವರಲ್ಲಿ ಒಬ್ಬರಾದರೂ ತನ್ನ ಮರಣಾ ನಂತರ ಗಯಾ ಕ್ಷೇತ್ರಕ್ಕೆ ಹೋಗಿ ತನಗೆ ಮುಕ್ತಿ ಸಿಗಲೆಂದು ಪಿಂಡದಾನ ಮಾಡುವಂತಾಗಲಿ ಎಂದು.

ಶ್ರೀ ವಾಲ್ಮಿಕೀ ರಾಮಾಯಣದ ಆಯೋಧ್ಯ ಕಾಂಡದಲ್ಲಿ….
ಏಷ್ಟವ್ಯಾಃ ಬಹವಃ ಪುತ್ರಾಃ ಯದ್ಯೇಕೋಖಪಿ ಗಯಾಂ ವ್ರಜೇತ್‌॥
ಶ್ರೀಮನ್ಮಹಾಭಾರತ ಆದಿ ಪರ್ವದಲ್ಲಿ 235, ವನ ಪರ್ವದಲ್ಲಿ 83, ವಾಯು ಪುರಾಣದಲ್ಲಿ 106 ಶ್ಲೋಕಗಳಲ್ಲಿ ಗಯಾ ಶ್ರಾದ್ಧದ ಮಹಿಮೆಯ ವಿಷಯ ಹೇಳಲ್ಪಟ್ಟಿದೆ.

ಶ್ರೀ ವಾಯುಪುರಾಣದಲ್ಲಿ ಗಯಾ ಶ್ರಾದ್ಧದ ಮಹಿಮೆ ಹೀಗಿದೆ…
ಗಯಾನಾಮ್ನಾ ಗಯಾಖ್ಯಾತಾಕ್ಷೇತ್ರಂ ಬ್ರಹ್ಮಾಭಿಕಾಂಕ್ಷಿತಂ
ಕಾಂಕ್ಷಂತಿ ಪಿತರಃ ಪುತ್ರಾನ್ ನರಕಾದ್ಭಯ ಭೀರವಃ॥
ಗಯಾಂ ಯಸ್ಯಾತಿ ಯಃ ಪುತ್ರಃ ಸ ನಸ್ತ್ರಾತಾ ಭವಿಷ್ಯತಿ
ಗಯಾ ಪ್ರಾಪ್ತಂ ಸುತಂ ದೃಷ್ಟ್ವಾ ಪಿತೃಣಾಮುತ್ಸವೋ ಭವೇತ್‌॥
ಪದ್ಭ್ಯಾಮಪಿ ಜಲಂ ಷ್ಟ್ರುಟ್ವಾ-ಸೋಸ್ಮಭ್ಯಂ ಕಿಂ ನ ದಾಸ್ಯತಿ
ಗಯಾಂಗತ್ವಾನ್ನದಾತಾ ಯಃ ಪಿತರಸ್ತೇನ ಪುತ್ರಿಣಃ॥
ಪಕ್ಷತ್ರಯ ನಿವಾಸೀ ಚ ಪುನತ್ಯಾಸಪ್ತಮಂ ಕುಲಮ್‌
ಬ್ರಹ್ಮಹತ್ಯಾ ಸುರಾಪಾನಂ ಸ್ತೇಯಂ ಗುರ್ವಂಗನಾಗಮಃ॥
ಪಾಪಂ ತತ್ಸಂಗಜಂ ಸರ್ವಂಗಯಾಶ್ರಾದ್ಧಾದ್ವಿನಶ್ಯತಿ
ಆತ್ಮಜೋಪ್ಯನ್ಯಜೋ ವಾಪಿ ಗಯಾ ಭೂಮೌ ಯದಾ ತದಾ॥
ಯನ್ನಾಮ್ನಾಪಾತಯೇತ್ಪಿಂಡಂ ತನ್ನಯೇದ್ಬ್ರಹ್ಮಶಾಶ್ವತಂ
ನಾಮ ಗೋತ್ರೇ ಸಮುಚ್ಚಾರ್ಯಪಿಂಡಪಾತನಮೀಕ್ಷತೇ॥
ಯೇನಕೇನಾಪಿ ಕಸ್ಮೈ ಚಿತ್ಸಯಾತಿ ಪರಮಾಂ ಗತಿಮ್‌॥

ಗಯಾ ಎಂಬ ಹೆಸರಿನಿಂದ ಪ್ರಸಿದ್ಧವಾದ ಕ್ಷೇತ್ರವಾದರೋ ಶ್ರೀ ಬ್ರಹ್ಮಾದಿ ದೇವತೆಗಳಿಂದ ಇಚ್ಛಿಸಲ್ಪಟ್ಟುದಾಗಿದೆ. (ತಾವು ಮಾಡಿರುವ ಕೆಟ್ಟ ಕರ್ಮಗಳ ಫಲವಾಗಿ ತಮಗೆ ಸಂಭವಿಸಬಹುದಾದ ನರಕಾದಿ ಲೋಕಗಳಿಂದ ಭಯಕ್ಕೆ ಒಳಗಾದ ಮೃತಿ ಹೊಂದಿದ ಪಿತೃಗಳಾದರೋ ತನ್ನ ಮಕ್ಕಳು ಗಯೆಗೆ ಹೋಗಿ ಅಲ್ಲಿ ತನಗೆ ಪಿಂಡ ದಾನವನ್ನು ಮಾಡಬೇಕೆಂದು ಇಚ್ಛಿಸುತ್ತಾರೆ.

ಯಾವ ಮಗನು ಗಯೆಗೆ ಹೋಗಿ ನಮ್ಮನ್ನುದ್ಧೇಶಿಸಿ ಪಿಂಡ ದಾನವನ್ನು ಮಾಡುತ್ತಾನೆಯೋ ಅವನೇ ನಮಗೆ ರಕ್ಷಕನಾಗಿರುತ್ತಾನೆ ಎಂಬ ಅಭಿಪ್ರಾಯದಿಂದ ಗಯೆಗೆ ಹೋದ ಮಗನನ್ನು ಕಂಡು ಪಿತೃಗಳು ಹರ್ಷ ಚಿತ್ತರಾಗುತ್ತಾರೆ.

ಕಾಲಿಂದಲಾದರೂ (ಗಯೆಯಲ್ಲಿರುವ ಫಲ್ಗು ನದಿಯ) ತೀರ್ಥವನ್ನು ಸ್ಪರ್ಶಿಸಿದವನು ನಮಗೆ ಏನನ್ನೂ ತಾನೇ ಕೊಡಲಾರ. ಗಯೆಗೆ ಹೋಗಿ ಮೃತರಾದ ಪಿತೃಗಳನ್ನುದ್ಧೇಶಿಸಿ ಅನ್ನ ದಾನವನ್ನು ಮಾಡುತ್ತಾರೆಯೋ, ಆ ಪುತ್ರನಿಂದಲೇ ಮೃತರಾದವರು ಪುತ್ರನನ್ನು ಹೊಂದಿದ ಭಾಗ್ಯವನ್ನು ಪಡೆದವರಾಗಿ ಪುತ್ರೀ ಎಂಬ ಶಬ್ದಕ್ಕೆ ಅರ್ಹರಾಗುತ್ತಾರೆ.

ಗಯಾ ಕ್ಷೇತ್ರದಲ್ಲಿ ಮೂರು ಪಕ್ಷಗಳು ವಾಸವಾಗಿದ್ದು-ಅನ್ನ ಶ್ರಾದ್ಧ, ಹಿರಣ್ಯ ಶ್ರಾದ್ಧ ಅಥವಾ ಆಮ ಶ್ರಾದ್ಧ ಅಥವಾ ತರ್ಪಣ ರೂಪದಲ್ಲಿ ತೀರ್ಥ ಶ್ರಾದ್ಧವನ್ನಾದರೂ ಮಾಡುವವನು ತನ್ನ ಹಿಂದಿನ ಏಳು ತಲೆಮಾರಿನ ಪಿತೃಗಳನ್ನು-ಅವರ ಪಾಪ ಕರ್ಮಗಳಿಂದ ಬಿಡಿಸಿ ಶುದ್ಧಿ ಗೊಳಿಸುತ್ತಾನೆ!

ಗಯಾ ಶ್ರಾದ್ಧ ಮಾಡುವವನಿಗೂ ಮತ್ತು ಅವನ ವಂಶದಲ್ಲಿ ಜನಿಸಿ ಮೃತಿ ಹೊಂದಿದವರಿಗೂ ಸಂಭವಿಸಿದ ಬಹಳ ಘೋರವಾದ ಬ್ರಹ್ಮಹತ್ಯಾ, ಸುರಾಪಾನ, ಸ್ವರ್ಣಸ್ತೇಯ, ತಾಯಿಯೇ ಮೊದಲಾದ ಹಿರಿಯ ಸ್ತ್ರೀಯರೊಡನೆ ಲೈಂಗಿಕ ಸಂಬಂಧ ಇವೇ ಮೊದಲಾದ ಪಾಪಗಳು ಗಯಾ ಶ್ರಾದ್ಧ ಮಾಡುವುದರಿಂದ ನಾಶವಾಗುತ್ತದೆ.

ತನ್ನ ಸ್ವಂತ ಮಗನೇ ಆಗಲೀ ಅಥವಾ ಬೇರಾರ ಮಗನೇ ಆಗಲೀ ಮೃತಿ ಹೊಂದಿದ ಯಾವ ಚೇತನನ ಗೋತ್ರ, ಹೆಸರನ್ನು ಹೇಳಿ ಯಾವಾಗ ಗಯಾ ಕ್ಷೇತ್ರದಲ್ಲಿ ಪಿಂಡ ದಾನ ಮಾಡುತ್ತಾನೆಯೋ ಆ ಕ್ಷಣದಲ್ಲಿಯೇ ಅವನು ಕೊಟ್ಟ ಪಿಂಡಕ್ಕೆ ಪಾತ್ರನಾದ ಚೇತನನು ಬ್ರಹ್ಮ ಸಾಯುಜ್ಯವನ್ನು ಪಡೆಯುತ್ತಾನೆ.

Tags: Dr. Gururaja PoshettihalliKannada ArticleMahalaya AmavasyePaksha MasaPitru PakshaShraddaSpecial ArticleSri Gaya Gadadharaಗಯಾ ಶ್ರಾದ್ಧ ಮಹಿಮಾಡಾ. ಗುರುರಾಜ ಪೋಶೆಟ್ಟಿಹಳ್ಳಿಪಕ್ಷಮಾಸಪಿತೃಪಕ್ಷಮಹಾಲಯ ಅಮಾವಾಸ್ಯೆಶ್ರಾದ್ಧಕರ್ಮಶ್ರೀ ಗಯಾ ಗದಾಧರ ಸ್ತೋತ್ರಶ್ರೀ ಚತುರ್ಮುಖ ಬ್ರಹ್ಮದೇವರುಶ್ರೀ ಮಹಾವಿಷ್ಣು
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವದ ಇಬ್ಬರು ಬಲಿಷ್ಠ ನಾಯಕರನ್ನೇ ಕರೆದು ನಿಲ್ಲಿಸಿ, ಸೆಲ್ಫಿ ಕ್ಲಿಕ್ಕಿಸಿಕೊಂಡ ಆ ಬಾಲಕ ನಮ್ಮ ಉತ್ತರ ಕನ್ನಡದವನು

Next Post

ಯುವ ಕಲಾವಿದರಿಗೆಲ್ಲ ಮಾದರಿ ಕಷ್ಟಗಳ ಮೆಟ್ಟಿ ಸಾಧನಾ ಹಾದಿಯಲ್ಲಿರುವ ‘ನೀಲಾ ಜೇವರ್ಗಿ’

kalpa News

kalpa News

Next Post
ಯುವ ಕಲಾವಿದರಿಗೆಲ್ಲ ಮಾದರಿ ಕಷ್ಟಗಳ ಮೆಟ್ಟಿ ಸಾಧನಾ ಹಾದಿಯಲ್ಲಿರುವ ‘ನೀಲಾ ಜೇವರ್ಗಿ’

ಯುವ ಕಲಾವಿದರಿಗೆಲ್ಲ ಮಾದರಿ ಕಷ್ಟಗಳ ಮೆಟ್ಟಿ ಸಾಧನಾ ಹಾದಿಯಲ್ಲಿರುವ 'ನೀಲಾ ಜೇವರ್ಗಿ'

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL