ಬೆಂಗಳೂರು: ತಾವು ಅತ್ಯಂತ ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್ ನವರಿಗೆ ಐಟಿ ಇಲಾಖೆಯ ಭಯವೇಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಸಚಿವ ಸಿ.ಎಸ್. ಪುಟ್ಟರಾಜು ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಅವರು ಖಂಡಿಸಿದ್ದಾರೆ.
ರಾಜಕೀಯ ದಾಳಿ ಎಂಬಂತಹ ಹೇಳಿಕೆಗಳನ್ನು ನೀಡುವ ಪುಟ್ಟರಾಜು ಅವರಿಗೆ ನಾಚಿಕೆಯಾಗಬೇಕು. ಐಟಿ ಅಧಿಕಾರಿಗಳು ತಮ್ಮ ಕಾನೂನಿನ ಅಡಿಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ತಾವು ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಈ ಜೆಡಿಎಸ್’ನವರಿಗೆ ಭಯವೇಕೆ ಎಂದು ಪ್ರಶ್ನಿಸಿದರು.
















