ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಚುನಾವಣೆಗೂ ಮುನ್ನ ಬಿಜೆಪಿ ನೀಡಿದ್ದ ವಾಗ್ದಾನದಂತೆ ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಪಶುಗಳ ಸಂರಕ್ಷಣೆ ಮಸೂದೆ 2020 ನಿನ್ನೆ ವಿಧಾನಸಭೆಯಲ್ಲಿ ಅನುಮೋದನೆಗೊಂಡಿರುವ ಹಿನ್ನೆಲೆಯಲ್ಲಿ ನಗರದ ವಿವಿದೆಢೆ ಗೋಪೂಜೆ ಸಲ್ಲಿಸಿ ಸಂಭ್ರಮಾಚರಣೆ ಮಾಡಲಾಯಿತು.
ಬಿಜೆಪಿ ಯುವಮೋರ್ಚಾ
ಶ್ರೀ ಜ್ಞಾನೇಶ್ವರಿ ಗೋಶಾಲೆಗೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಗೋಮಾತೆಗೆ ಪೂಜೆ ಸಲ್ಲಿಸಲಾಯಿತು. ಅಧ್ಯಕ್ಷರಾದ ದರ್ಶನ್, ನಗರ ಅಧ್ಯಕ್ಷರಾದ ಜಗದೀಶ್, ಪ್ರಧಾನ ಕಾರ್ಯದರ್ಶಿಗಳಾದ ಬಳ್ಳೇಕೆರೆ ಸಂತೋಷ್, ಗೋ ಶಾಲೆಯ ಅಧ್ಯಕ್ಷರು, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಅಭಿಷೇಕ್, ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷ ಗಣೇಶ್ ಬಿಳಕಿ ಹಾಗೂ ಯುವ ಮೋರ್ಚಾದ ಪದಾಧಿಕಾರಿಗಳು ಸದಸ್ಯರುಗಳು ಇದ್ದರು.
ನಗರ ಮಹಿಳಾ ಮೋರ್ಚಾ
ಮಂಡೇನಕೊಪ್ಪದ ಸುರಭಿ ಗೋಶಾಲೆಯಲ್ಲಿ ನಗರ ಬಿಜೆಪಿ ಮಹಿಳಾ ಮೋರ್ಚಾದಿಂದ ಗೋಪೂಜೆಯೊಂದಿಗೆ ಐದು ಸಾವಿರ ರೂ.ಗಳ ದೇಣಿಗೆ ನೀಡುವುದರ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.
ನಗರಾಧ್ಯಕ್ಷರಾದ ಜಗದೀಶ್, ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಸುರೇಖಾ ಮುರಳೀಧರ್, ಪ್ರಧಾನ ಕಾರ್ಯದರ್ಶಿಗಳಾದ ಆರತಿ ಪ್ರಕಾಶ್, ರಶ್ಮಿ ಶ್ರೀನಿವಾಸ್, ಮೇಯರ್ ಸುವರ್ಣ ಶಂಕರ್, ಪ್ರಮುಖರಾದ ಚನ್ನಬಸಪ್ಪ, ಸುನಿತಾ ಅಣ್ಣಪ್ಪ, ರಾಧಾ ರಾಮಚಂದ್ರ, ರಶ್ಮಿ, ಗೀತಾ, ಅನಿಲ, ಸುನೀತಾ, ಯಶೋಧ, ಪ್ರಭಾಕರ್, ಮಂಜುನಾಥ್, ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post