ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮುಂಬೈ: ಕೊರೋನಾ ವೈರಸ್ ಲಾಕ್’ಡೌನ್’ನಿಂದ ತತ್ತರಿಸಿರುವ ದೇಶವಾಸಿಗಳ ನೆರವಿಗೆ ಧಾವಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್ ಸಾಲದ ಮೇಲಿನ ಇಎಂಐ ಪಾವತಿ ಅವಧಿಯನ್ನು ಆಗಸ್ಟ್ 1ರವರೆಗೂ ವಿಸ್ತರಣೆ ಮಾಡಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಆರ್’ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಕಳೆದ ಮಾರ್ಚ್‌ನಲ್ಲಿ ಇಎಂಐ ಪಾವತಿಯನ್ನು ಮೂರು ತಿಂಗಳಿಗೆ ಅಂದರೆ ಜೂನ್ 1ಕ್ಕೆ ವಿಸ್ತರಿಸಲಾಗಿತ್ತು. ಆದರೆ, ಈಗ ಮತ್ತೆ ಆಗಸ್ಟ್ 31ರವರೆಗೆ ವಿಸ್ತರಿಸಿದೆ ಎಂದಿದ್ದಾರೆ.
ಮಾರುಕಟ್ಟೆಗಳ ಕಾರ್ಯಚಟುವಟಿಕೆಯನ್ನು ಸುಧಾರಿಸುವುದು, ರಫ್ತು ಮತ್ತು ಆಮದುಗಳನ್ನು ಬೆಂಬಲಿಸುವುದು ಹಾಗೂ ಸಾಲ ಸೇವೆಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಒತ್ತಡವನ್ನು ಸರಾಗಗೊಳಿಸುವುದು ನಮ್ಮ ಉದ್ದೇಶ ಎಂದು ಹೇಳಿದ್ದಾರೆ.
ಒಂದು ಸಣ್ಣ ವೈರಸ್ ಹೇಗೆ ಜಗತ್ತಿನಲ್ಲಿ ದೊಡ್ಡ ಆರ್ಥಿಕ ಬಿಕ್ಕಟ್ಟು ಸೃಷ್ಟಿಸಿದೆ . ಸದ್ಯ ದೇಶದ ಆರ್ಥಿಕ ಸ್ಥಿತಿ ತೀರಾ ಸಂಕಷ್ಟಕ್ಕೆ ಸಿಲುಕಿದೆ. ಆದರೆ ಕೃಷಿ ಕ್ಷೇತ್ರ ಮಾತ್ರ ಆಶಾದಾಯಕವಾಗಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಆರ್ ಬಿಐ ಹಲವು ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು ಹಣದ ನಿರ್ವಹಣೆ ಅತ್ಯಗತ್ಯವಾಗಿದೆ ಎಂದರು.
Get in Touch With Us info@kalpa.news Whatsapp: 9481252093
Discussion about this post