ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಇಂದಿನ ಮಾಹಿತಿ ಬಿಡುಗಡೆ ಮಾಡದ್ದು, ಇದರಂತೆ ಇಂದು ನಾಲ್ಕು ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ರೋಗಿ ಸಂಖ್ಯೆ 6149ರೊಂದಿಗೆ ಸಂಪರ್ಕ ಹೊಂದಿದ್ದ 51 ಹಾಗೂ 24 ವರ್ಷದ ಇಬ್ಬರು ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನುಳಿದಂತೆ ಮಹಾರಾಷ್ಟ್ರದ ಪ್ರಯಾಣ ಹಿನ್ನೆಲೆ ಹೊಂದಿರುವ 5 ವರ್ಷ ಗಂಡು ಮಗುವಿಗೆ ಹಾಗೂ ತೀವ್ರ ಉಸಿರಾಟದ ತೊಂದರೆ ಹೊಂದಿರುವ 56 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ.
Get In Touch With Us info@kalpa.news Whatsapp: 9481252093

















